ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಖಾಲಿ ಇರುವ ವಿವಿಧ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KIMS Hubballi Recruitment 2024
ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿ ವತಿಯಿಂದ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳ ನೇರ ನೇಮಕಾತಿಗೆ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಪ್ರೊಫೆಸರ್ & ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 06-01-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಪ್ರೊಫೆಸರ್ | 02 |
ಅಸಿಸ್ಟೆಂಟ್ ಪ್ರೊಫೆಸರ್ | 05 |
ಒಟ್ಟು ಹುದ್ದೆಗಳು | 07 ಹುದ್ದೆಗಳು |
ವೇತನ ಶ್ರೇಣಿ:
ಕರ್ನಾಟಕ ಸರ್ಕಾರದ ನಿಯಮಾವಳಿಗಳ ಅನ್ವಯ ವೇತನ & ಇತರೆ ಭತ್ಯೆಗಳನ್ನು ನೀಡಲಾಗುತ್ತದೆ
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಎಂಬಿಬಿಎಸ್ ಪದವಿ & ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ :
ರೂ. 1500/-
ಅರ್ಜಿ ಶುಲ್ಕವನ್ನು Director, KIMS, Hubballi ಅವರ ಹೆಸರಿಗೆ ಪಾವತಿಯಾಗುವಂತೆ ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಗರಿಷ್ಟ 55 ವರ್ಷವನ್ನು ಮೀರಿರಬಾರದು.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 06.01.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ಬ್ಯಾಂಕ್ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 21-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-01-2024
Important Links/ ಪ್ರಮುಖ ಲಿಂಕುಗಳು:
Pingback: ನ್ಯಾಷನಲ್ ಇನ್ಸುರೆನ್ಸ್ ಕಂಪನಿ ನಿಯಮಿತದಲ್ಲಿ (NICL) ಖಾಲಿ ಇರುವ 274 ಆಫೀಸರ್ ಸ್ಕೇಲ್ 1 ಹುದ್ದೆಗಳ ಭರ್ತಿಗೆ ಅರ್ಜಿ ಆಹ
Pingback: ಕರ್ನಾಟಕ ನ್ಯಾಯಾಂಗ ಇಲಾಖೆಯಲ್ಲಿ ಹತ್ತನೇ ಮುಗಿದವರಿಗೆ ಉದ್ಯೋಗಾವಕಾಶ: 31 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ: ವೇತನ ರ