ಕರ್ನಾಟಕ ನಗರ ನೀರು ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಒಟ್ಟು FDAA & AE ಹುದ್ದೆಗಳಿಗೆ ಅರ್ಜಿ ಆಹ್ವಾನ: KEA KUWSDB Detailed Notification 2024
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿಯಲ್ಲಿ (KUWSDB) ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ವಿವರವಾದ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರು & ಸಹಾಯಕ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಒಟ್ಟು 64 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದ್ದು, ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು KEA ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 10-03-2024 ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಗ್ರಾಮೀಣ ವಿದ್ಯುತ್ ನಿಗಮ ದಲ್ಲಿ ಖಾಲಿ ಇರುವ 127 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿಯಲ್ಲಿ (KUWSDB) ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ಚಾಲಕ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಸಹಾಯಕ ಇಂಜಿನಿಯರ್ (ಸಿವಿಲ್) | 50 |
ಪ್ರಥಮ ದರ್ಜೆ ಸಹಾಯಕರು | 14 |
ಒಟ್ಟು ಹುದ್ದೆಗಳು | 64 ಹುದ್ದೆಗಳು |
ವೇತನ ಶ್ರೇಣಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಸಹಾಯಕ ಇಂಜಿನಿಯರ್ (ಸಿವಿಲ್) | 43100-83900 |
ಪ್ರಥಮ ದರ್ಜೆ ಸಹಾಯಕರು | 27650-52650 |
ವಿದ್ಯಾರ್ಹತೆ ಏನಿರಬೇಕು?
ಸಹಾಯಕ ಇಂಜಿನಿಯರ್ (ಸಿವಿಲ್): ಅಂಗೀಕೃತ ವಿಶ್ವವಿದ್ಯಾಲಯದಿಂದ ಸಿವಿಲ್ ವಿಭಾಗದಲ್ಲಿ ಬಿಇ/ ಬಿಟೆಕ್ ಅನ್ನು ಮುಗಿಸಿರಬೇಕು.
ಪ್ರಥಮ ದರ್ಜೆ ಲೆಕ್ಕ ಸಹಾಯಕರು: ಅಂಗೀಕೃತ ವಿಶ್ವವಿದ್ಯಾಲಯದಿಂದ ವಾಣಿಜ್ಯಶಾಸ್ತ್ರ ವಿಷಯದಲ್ಲಿ ಪದವಿಯನ್ನು (ಬಿಕಾಂ) ಮುಗಿಸಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು
ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ ಹಾಗೂ ಪ್ರವರ್ಗ 2ಎ, 2ಬಿ, 3ಎ & 3ಬಿ | ರೂ. 750/- |
ಎಸ್.ಸಿ ,ಎಸ್.ಟಿ, ಪ್ರವರ್ಗ 1, ವಿಕಲಚೇತನರು & ಮಾಜಿ ಸೈನಿಕರು | ರೂ. 500/- |
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು KEA ಅಧಿಕೃತ ವೆಬ್ಸೈಟ್ kea.kar.nic.in ವೆಬ್ಸೈಟ್ ನಲ್ಲಿ ದಿನಾಂಕ 10-02-2024 ರಿಂದ 10-03-2024 ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಬೆಂಗಳೂರಿನ IISC ಯಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ದಿನಾಂಕಗಳು:
ಪ್ರಾರಂಭದ ದಿನಾಂಕ: 10-02-2024
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 10-03-2024
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 14-03-2024
ಅಧಿಕೃತ ಲಿಂಕ್/ Official Links:
Pingback: ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ: ZP Shimoga Recruitment 2024 -
Pingback: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಕ್ಲರ್ಕ್ ಅಥವಾ ಜೂ. ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SSC LDC Recruitment 2024
Pingback: ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ: ZP Shimoga Jobs 2024 - EduTech