SDA, FDA ಹುದ್ದೆಗಳಿಗೆ ಪಿಯುಸಿ/ ಯಾವುದೇ ಪದವಿ ಮುಗಿದವರು ಅರ್ಜಿ ಹಾಕಿ- ಕರ್ನಾಟಕ ಕಾರ್ಮಿಕ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ: : KEA Labour Dept jobs 2023
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕರ್ನಾಟಕ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ, ಆಪ್ತ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು KEA ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 26 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಕಲ್ಯಾಣ ಅಧಿಕಾರಿ | 12 |
ಕ್ಷೇತ್ರ ನಿರೀಕ್ಷಕರು | 60 |
ಪ್ರಥಮ ದರ್ಜೆ ಸಹಾಯಕರು | 12 |
ಆಪ್ತ ಸಹಾಯಕರು | 02 |
ದ್ವಿತೀಯ ದರ್ಜೆ ಸಹಾಯಕರು | 100 |
ಒಟ್ಟು ಹುದ್ದೆಗಳು | 186 ಹುದ್ದೆಗಳು |
ವೇತನ ಶ್ರೇಣಿ:
ಕಲ್ಯಾಣ ಅಧಿಕಾರಿ | 37400-70850 |
ಕ್ಷೇತ್ರ ನಿರೀಕ್ಷಕರು | 33450-62600 |
ಪ್ರಥಮ ದರ್ಜೆ ಸಹಾಯಕರು | 27650-52650 |
ಆಪ್ತ ಸಹಾಯಕರು | 27650-52650 |
ದ್ವಿತೀಯ ದರ್ಜೆ ಸಹಾಯಕರು | 21400-42000 |
ವಿದ್ಯಾರ್ಹತೆ ಏನಿರಬೇಕು?
ಅಂಗೀಕೃತ ವಿಶ್ವವಿದ್ಯಾಲಯ/ ಬೋರ್ಡ್ ನಿಂದ ಪಿಯುಸಿ ಅಥವಾ ಯಾವುದೇ ವಿಷಯದಲ್ಲಿ ಪದವಿಯನ್ನು ಮುಗಿಸಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು
ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ | ರೂ. 500/- |
2ಎ, 2ಬಿ, 3ಎ & 3ಬಿ | ರೂ. 300/- |
ಎಸ್.ಸಿ ,ಎಸ್.ಟಿ & ಪ್ರವರ್ಗ 1 | ರೂ. 200/- |
ವಿಕಲಚೇತನರು & ಮಾಜಿ ಸೈನಿಕರು | ರೂ. 100/- |
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು KEA ಅಧಿಕೃತ ವೆಬ್ಸೈಟ್ kea.kar.nic.in ವೆಬ್ಸೈಟ್ ನಲ್ಲಿ ದಿನಾಂಕ 22-07-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ದಿನಾಂಕಗಳು:
ಪ್ರಾರಂಭದ ದಿನಾಂಕ: 23-06-2023
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 22-06-2023
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 25-07-2023
ಅಧಿಕೃತ ಲಿಂಕ್/ Official Links:
Pingback: ಹುಬ್ಬಳ್ಳಿಯ ರೈಲ್ವೇಯಲ್ಲಿ ಹತ್ತನೇ ಮುಗಿದವರಿಗೆ 904 ಹುದ್ದೆಗಳಿಗೆ ಅರ್ಜಿ ಆಹ್ವಾನ: ಹುಬ್ಬಳ್ಳಿ, ಮೈಸೂರು & ಬೆಂಗ
Pingback: Indian Postal 12828 GDS Posts :ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 12828 GDS ಹುದ್ದೆಗಳ ಭರ್ತಿ:- ಇದೀಗ ತಾನೇ ಆಯ್ಕೆ ಪಟ್ಟಿ ಬಿಡುಗಡೆ -