ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: UAS Blr Teaching Recruitment 2024

Click to Share

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: UAS Blr Teaching Recruitment 2024

ಕರ್ನಾಟಕ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ವತಿಯಿಂದ ಖಾಲಿ ಇರುವ ಬೋಧಕ  ಹುದ್ದೆಗಳ ನೇರ ನೇಮಕಾತಿಗೆ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಅಸೋಸಿಯೇಟ್ ಪ್ರೊಫೆಸರ್ & ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸುವ ದಿನಾಂಕವನ್ನು 04-04-2024 ರವರೆಗೆ ವಿಸ್ತರಿಸಲಾಗಿದೆ. ಈ ಹುದ್ದೆಗಳನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಾಲ್ಕು ಇಲಾಖೆಗಳಲ್ಲಿನ 670 ಹುದ್ದೆಗಳ ನೇಮಕಾತಿ ಕುರಿತಂತೆ ಮಹತ್ವದ ಮಾಹಿತಿ ಬಿಡುಗಡೆ

UAS Bengaluru ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಭಾರತೀಯ ಜೀವ ವಿಮಾ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಅಸೋಸಿಯೇಟ್ ಪ್ರೊಫೆಸರ್ 05
ಅಸಿಸ್ಟೆಂಟ್ ಪ್ರೊಫೆಸರ್ 50
ಒಟ್ಟು ಹುದ್ದೆಗಳು 55 ಹುದ್ದೆಗಳು

ವೇತನ ಶ್ರೇಣಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಅಸೋಸಿಯೇಟ್ ಪ್ರೊಫೆಸರ್ 131400-217100
ಅಸಿಸ್ಟೆಂಟ್ ಪ್ರೊಫೆಸರ್ 57700-182400

ಯುಜಿಸಿ ನಿಯಮಾವಳಿಗಳ ಅನ್ವಯ ವೇತನ & ಇತರೆ ಭತ್ಯೆಗಳನ್ನು ನೀಡಲಾಗುತ್ತದೆ

 

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ  ಕನಿಷ್ಟ ಶೇ. 55% ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ & ಪಿಎಚ್ಡಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ  :

ಪಜಾ/ ಪಪಂ ಅಭ್ಯರ್ಥಿಗಳಿಗೆ : ರೂ. 2000/-

ಸಾಮಾನ್ಯ/ OBC / EWS ಅಭ್ಯರ್ಥಿಗಳಿಗೆ : ರೂ. 1000/-

ಮಾಜಿಸೈನಿಕ/ ವಿಕಲಚೇತನ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ

ಅರ್ಜಿ ಶುಲ್ಕವನ್ನು Administrative Officer, University of Agricultural Sciences Bengaluru-560065 ಅವರ ಹೆಸರಿಗೆ ಪಾವತಿಯಾಗುವಂತೆ ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಗರಿಷ್ಟ 42 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ ಪಪಂ: 03 ವರ್ಷ

ಇತರೆ ಹಿಂದೂಳಿದ ವರ್ಗ: 02 ವರ್ಷ

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 04.04.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ಬ್ಯಾಂಕ್ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕ ಕೈಗಾರಿಕೆ & ವಾಣಿಜ್ಯ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 24-02-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-04-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

Application Format

Date Extension Notice

Official Website


Click to Share
Scroll to Top