ಬಿಇಎಲ್ ಕರ್ನಾಟಕದಲ್ಲಿ ಖಾಲಿ ಇರುವ ಪಿಯು ಉಪನ್ಯಾಸಕರು, ಪ್ರೌಢಶಾಲಾ ಶಿಕ್ಷಕರು & ಕಛೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ: BEEI Recruitment 2024

Click to Share

ಬಿಇಎಲ್ ಕರ್ನಾಟಕದಲ್ಲಿ ಖಾಲಿ ಇರುವ ಪಿಯು ಉಪನ್ಯಾಸಕರು, ಪ್ರೌಢಶಾಲಾ ಶಿಕ್ಷಕರು & ಕಛೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ: BEEI Recruitment 2024

ಬಿಇಎಲ್ ಶಿಕ್ಷಣ ಸಂಸ್ಥೆ,  ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಪಿಯು ಉಪನ್ಯಾಸಕರು, ಪಿಜಿಟಿ ಶಿಕ್ಷಕರು, ಕಛೇರಿ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 23-04-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕದ ಸೈನಿಕ ವಸತಿ ಶಾಲೆಯಲ್ಲಿ ಖಾಲಿ ಇರುವ ವಾರ್ಡನ್ & ಇತರೆ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 34800/-

BEL Educational Institutions, Bengaluru ಇಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ:

Nursery Teacher- 01
PRT/ ಪ್ರಾಥಮಿಕ ಶಿಕ್ಷಕರು- 02
GPT ಶಿಕ್ಷಕರು- 05
ಪ್ರೌಢಶಾಲಾ ಶಿಕ್ಷಕರು- 11
ಪಿಜಿಟಿ ಶಿಕ್ಷಕರು- 03
ಪಿಯು ಉಪನ್ಯಾಸಕರು- 03
Lectures in FGC- 03
Co-Scholastics Teacher- 05
Assistant Administrative Officer- 01
Office Assistant- 01

ವೇತನ ಶ್ರೇಣಿ:

Nursery Teacher- 18700/-
PRT/ ಪ್ರಾಥಮಿಕ ಶಿಕ್ಷಕರು- 18700/-
GPT ಶಿಕ್ಷಕರು- 21350/-
ಪ್ರೌಢಶಾಲಾ ಶಿಕ್ಷಕರು- 24200/-
ಪಿಜಿಟಿ ಶಿಕ್ಷಕರು- 24200/-
ಪಿಯು ಉಪನ್ಯಾಸಕರು- 24200/-
Lectures in FGC- 25100
Co-Scholastics Teacher- 05
Assistant Administrative Officer- 16250
Office Assistant- 16250

 

ಶೈಕ್ಷಣಿಕ ಅರ್ಹತೆಗಳು:

Nursery Teacher- Any Degree with NTT/ MTT
PRT/ ಪ್ರಾಥಮಿಕ ಶಿಕ್ಷಕರು- Degree with B.Ed in relevant field
GPT ಶಿಕ್ಷಕರು- Degree with B.Ed in relevant field
ಪ್ರೌಢಶಾಲಾ ಶಿಕ್ಷಕರು- Master Degree with B.Ed in relevant field
ಪಿಜಿಟಿ ಶಿಕ್ಷಕರು- Master Degree with B.Ed in relevant field
ಪಿಯು ಉಪನ್ಯಾಸಕರು- Master Degree with B.Ed in relevant field
Lectures in FGC- Master Degree with B.Ed in relevant field
Co-Scholastics Teacher- Degree in Music/ Fine Arts/ Drawing/ BFA/ B.Lib/ M.Lib
Assistant Administrative Officer- MBA
Office Assistant- BCOM

ಅರ್ಜಿ ಶುಲ್ಕ  :

ಅರ್ಜಿ ಶುಲ್ಕವಿರುವುದಿಲ್ಲ.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 23.04.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ಶಾಲೆಯ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 70 ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-04-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ನಮೂನೆ/ Application

Website/ ಜಾಲತಾಣ

 


Click to Share

3 thoughts on “ಬಿಇಎಲ್ ಕರ್ನಾಟಕದಲ್ಲಿ ಖಾಲಿ ಇರುವ ಪಿಯು ಉಪನ್ಯಾಸಕರು, ಪ್ರೌಢಶಾಲಾ ಶಿಕ್ಷಕರು & ಕಛೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ: BEEI Recruitment 2024”

  1. Pingback: ಮೈಸೂರಿನ ಪ್ರಾದೇಶಿಕ ಸಂಸ್ಥೆಯಲ್ಲಿ ಕಂಪ್ಯೂಟರ್ ಅಸಿಸ್ಟೆಂಟ್ & ಗ್ರಂಥಾಲಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾ

  2. Pingback: ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಬ್ಯಾಕ್ ಲಾಗ್ (HK & NHK) ಭರ್ತಿಗೆ ಅರ್ಜಿ ಆಹ್ವಾನ- KLA Reporter Re

  3. Pingback: ನವೋದಯ ವಿದ್ಯಾಲಯದಲ್ಲಿ ಖಾಲಿ ಇರುವ 500 TGT & PGT ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ: NVS 500 TGT & PGT Jobs 2024 - EduTech Kannada

Leave a Comment

Your email address will not be published. Required fields are marked *

Scroll to Top