ಕರ್ನಾಟಕ ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ 122 ಹುದ್ದೆಗಳ ಬೃಹತ್ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: CSB 122 Posts Apply now 2024
ಕೇಂದ್ರಿಯ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಸೈಂಟಿಸ್ಟ್ ಬಿ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಒಟ್ಟು 122 ಸೈಂಟಿಸ್ಟ್ ಬಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆಸಕ್ತರು 12-05-2024 ರ ಒಳಗಾಗಿ ಅರ್ಜಿ ಹಾಕಿ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
Central Silk Board ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 50000/-
ಹುದ್ದೆಗಳ ವಿವರ:
ಇಲಾಖೆ/ ಸಂಸ್ಥೆ: ಕೇಂದ್ರೀಯ ರೇಷ್ಮೆ ಮಂಡಳಿ
ಹುದ್ದೆಗಳ ಹೆಸರು: ಸೈಂಟಿಸ್ಟ್ ಬಿ ಹುದ್ದೆಗಳು
ಹುದ್ದೆಗಳ ಸಂಖ್ಯೆ- 122 ಹುದ್ದೆಗಳು
ಕೆಲಸದ ಸ್ಥಳ: ಬೆಂಗಳೂರು
ವೇತನ ಶ್ರೇಣಿ:
ಮೂಲವೇತನ ರೂ. 56100-177500
ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಇತರೆ ಸೌಲಭ್ಯಗಳು ದೊರೆಯುತ್ತವೆ.
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Master Degree in Science/ Master Degree in Agricultural Sciences ವಿದ್ಯಾರ್ಹತೆ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ :
ಸಾಮಾನ್ಯ ವರ್ಗ: ರೂ. 1900/-
ಓಬಿಸಿ & EWS: ರೂ. 1800/-
ಪಜಾ/ಪಪಂ/ತೃತೀಯ ಲಿಂಗಿ/ ವಿಕಲಚೇತನ: ರೂ. 975/-
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತರು ಅರ್ಜಿಗಳನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.csb.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 56000/-
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 11-04-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-05-2024
Important Links/ ಪ್ರಮುಖ ಲಿಂಕುಗಳು:
Pingback: ಕೇಂದ್ರಿಯ ತನಿಖಾ ಧಳದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ವೇತನ ರೂ. 39100/- CBI Recruitment Notified 2024 - EduTech Kannada