ಕಾಫಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಆಪರೇಟರ್ ಹುದ್ದೆಗಳಿಗೆ ಯಾವುದೇ ಪದವಿಧರರಿಂದ ಅರ್ಜಿ ಆಹ್ವಾನ: Coffee Board Jobs 2024
ಕಾಫಿ ಬೋರ್ಡ್, ಬೆಂಗಳೂರು ಇಲ್ಲಿ ಖಾಲಿ ಇರುವ ಕಾಲ್ ಸೆಂಟರ್ ಆಪರೇಟರ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಇಮೇಲ್ ಮೂಲಕ ಅರ್ಜಿ ಸಲ್ಲಿಸಲು 19-05-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಇಮೇಲ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕದ ವಸತಿ ಶಾಲೆಯಲ್ಲಿ ಖಾಲಿ ಇರುವ ಕ್ಲರ್ಕ್ & ಚಾಲಕರು ಸೇರಿ ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Coffee Board, Bengaluru ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕಾಫಿ ಬೋರ್ಡ್, ಬೆಂಗಳೂರು
ಹುದ್ದೆಗಳ ಹೆಸರು: ಕಾಲ್ ಸೆಂಟರ್ ಆಪರೇಟರ್
ಹುದ್ದೆಗಳ ಸಂಖ್ಯೆ- 01
ಕೆಲಸದ ಸ್ಥಳ: ಬೆಂಗಳೂರು
ವೇತನ ಶ್ರೇಣಿ/ Salary Scale:
ಕಾಫಿ ಬೋರ್ಡ್ Bengaluru ನಿಯಮಾವಳಿಗಳನ್ವಯ ಮಾಸಿಕ ರೂ. 15000-18000/- ವೇತನ ನೀಡಲಾಗುತ್ತದೆ.
Education/ ವಿದ್ಯಾರ್ಹತೆ
ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿಯನ್ನು ಮುಗಿಸಿರಬೇಕು. ಕನ್ನಡ & ಆಂಗ್ಲ ಭಾಷೆಯ ಸಂವಹನ ಕೌಶಲ್ಯ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit:
ಅಭ್ಯರ್ಥಿಗಳು ಗರಿಷ್ಟ ಅಂದರೇ 45 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Application Fees
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ / Selection Method
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು ಇತ್ತೀಚಿನ CV ಯನ್ನು ಅಗತ್ಯ ದಿನಾಂಕ 19-05-2024 ರ ಒಳಗಾಗಿ hpriyanka17997@gmail.com ಇಮೇಲ್ ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ವಿವರಗಳಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ ದಿನಾಂಕ: 06-05-2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 19-05-2024
ಅಧಿಕೃತ ಲಿಂಕ್/ Official Links: