ಬೆಂಗಳೂರಿನ ಬೆಮೆಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ 100 ಗ್ರೂಪ್ ಸಿ ಕಛೇರಿ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Apply today BEML Group C Recruitment 2024
BEML ಲಿಮಿಟೆಡ್ ನಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಐಟಿಐ ಟ್ರೈನಿ ಹಾಗೂ ಕಛೇರಿ ಸಹಾಯಕ ಸೇರಿದಂತೆ ಒಟ್ಟು 140 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 04-09-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಿಂದ ಅಧಿಸೂಚನೆ: ಜಿಲ್ಲಾ ಸಮಾಲೋಚಕ ಹುದ್ದೆಗಳ ಭರ್ತಿ: ವೇತನ ರೂ. 35000/-
BEML Limited ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕದ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 8000 ಕ್ಕೂ ಹೆಚ್ಚು ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ITI Trainee – Fitter | 07 |
ITI Trainee-Turner | 11 |
ITI Trainee- Machinist | 10 |
ITI Trainee- Electrician | 08 |
ITI Trainee- Welder | 18 |
Office Assistant Trainee | 46 |
ವೇತನ ಶ್ರೇಣಿ:
BEML Limited ನಿಂದ ನಿಗದಿಪಡಿಸಿದಂತೆ ರೂ. 15500-20000 ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು:
ITI ಟ್ರೀನಿಸ್: ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕನಿಷ್ಟ 60% ಅಂಕಗಳೊಂದಿಗೆ ಸಂಬಂದಿಸಿದ ಟ್ರೇಡ್ ನಲ್ಲಿ ITI ವಿದ್ಯಾರ್ಹತೆ ಮುಗಿಸಿರಬೇಕು.
ಕಛೇರಿ ಸಹಾಯಕ: ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕನಿಷ್ಟ 60% ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ :
ಸಾಮಾನ್ಯ, EWS, ಓಬಿಸಿ ಅಭ್ಯರ್ಥಿಗಳಿಗೆ : ರೂ. 200/-
ಪ.ಜಾ/ ಪಪಂ/ PwBD ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು ಮತ್ತು 32 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತರು ಅರ್ಜಿಗಳನ್ನು ದಿನಾಂಕ 04.09.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.bemlindia.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-09-2024
Important Links/ ಪ್ರಮುಖ ಲಿಂಕುಗಳು: