ಆಯುರ್ವೇದ ಮಹಾವಿದ್ಯಾಲಯದಲ್ಲಿ ಖಾಲಿ ಇರುವ SDA, ಸ್ಟಾಫ್ ನರ್ಸ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Ayush Mahavidyalaya hubli Recruitment 2024

Click to Share

ಆಯುರ್ವೇದ ಮಹಾವಿದ್ಯಾಲಯದಲ್ಲಿ ಖಾಲಿ ಇರುವ SDA, ಸ್ಟಾಫ್ ನರ್ಸ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Ayush Mahavidyalaya hubli Recruitment 2024

ಹುಬ್ಬಳ್ಳಿ ಆಯುರ್ವೇದ ಸೇವಾ ಸಮಿತಿಯ ಆಯುರ್ವೇದ ಮಹಾವಿದ್ಯಾಲಯದ ಮತ್ತು ಆಸ್ಪತ್ರೆಯ ವತಿಯಿಂದ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ದ್ವಿತೀಯ ದರ್ಜೆ ಸಹಾಯಕರು, ಅಟೆಂಡರ್ ವಾರ್ಡ್ ಆಯಾ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 03-10-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಖುದ್ದಾಗಿ/ ಅಂಚೆಯ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ 108 ಆಫೀಸ್ ಅಸಿಸ್ಟೆಂಟ್ ನೇಮಕಾತಿಗೆ ಅಧಿಸೂಚನೆ

ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹುಬ್ಬಳ್ಳಿಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಭಾರತೀಯ ನಾರು ನಿಗಮ ನಿಯಮಿತದಲ್ಲಿ ಖಾಲಿ ಇರುವ ಕಿರಿಯ ನಿರೀಕ್ಷಕರು, ಕಿರಿಯ ಸಹಾಯಕ ಸೇರಿ ಒಟ್ಟು 90 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಹುದ್ದೆಗಳ ವಿವರ:

ಸಂಸ್ಥೆ/ ಇಲಾಖೆ: ಆಯುರ್ವೇದ ಮಹಾವಿದ್ಯಾಲಯ & ಆಸ್ಪತ್ರೆ

ಹುದ್ದೆಗಳ ಹೆಸರು: ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ

ತರಬೇತಿ ಹುದ್ದೆಗಳ ಸಂಖ್ಯೆ: 13

ಕೆಲಸದ ಸ್ಥಳ: ಹುಬ್ಬಳ್ಳಿ

ಹುದ್ದೆಗಳ ಹಂಚಿಕೆ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ದ್ವಿತೀಯ ದರ್ಜೆ ಸಹಾಯಕ 02
ಬೆರಳಚ್ಚುಗಾರರು 02
ಸ್ಟಾಫ್ ನರ್ಸ್ 02
ಎ.ಎನ್.ಎಮ್ ನರ್ಸ್ 01
ಫಾರ್ಮಾಸಿಸ್ಟ್ 02
ಲ್ಯಾಬೋರೆಟರಿ ಟೆಕ್ನಿಶಿಯನ್ 01
ಅಟೆಂಡರ್ 01
ಸ್ಯಾನಿಟರಿ ವರ್ಕರ್ 01
ವಾರ್ಡ್ ಆಯಾ 01

ವೇತನ ಶ್ರೇಣಿ:

ಹುದ್ದೆಗಳ ಹೆಸರು ವೇತನ ಶ್ರೇಣಿ
ದ್ವಿತೀಯ ದರ್ಜೆ ಸಹಾಯಕ 21400-42000
ಬೆರಳಚ್ಚುಗಾರರು 21400-42000
ಸ್ಟಾಫ್ ನರ್ಸ್ 33450-62600
ಎ.ಎನ್.ಎಮ್ ನರ್ಸ್ 23500-47650
ಫಾರ್ಮಾಸಿಸ್ಟ್ 27650-52650
ಲ್ಯಾಬೋರೆಟರಿ ಟೆಕ್ನಿಶಿಯನ್ 27650-52650
ಅಟೆಂಡರ್ 18600-32600
ಸ್ಯಾನಿಟರಿ ವರ್ಕರ್ 17000-28950
ವಾರ್ಡ್ ಆಯಾ 17000-28950

 

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಹತ್ತನೇ/ ಪಿಯುಸಿ/ ಪದವಿ/ ಫಾರ್ಮಾಸಿ/ ನರ್ಸಿಂಗ್ ವಿದ್ಯಾರ್ಹತೆಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ  :

ಗ್ರೂಪ್ ಸಿ ವೃಂದಕ್ಕೆ: ರೂ. 1000/-

ಗ್ರೂಪ್ ಡಿ ಹುದ್ದೆಗಳಿಗೆ : ರೂ. 600/-

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

ಇತರೆ ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ 03 ವರ್ಷ & ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 03.10.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ರೈಲ್ವೇ IRCTC ಯಲ್ಲಿ ಖಾಲಿ ಇರುವ 33 ಹಾಸ್ಪಿಟಾಲಿಟಿ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 30000/-

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 18-09-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-10-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

APPLICATION FORMAT

OFFICIAL WEBSITE


Click to Share

Leave a Comment

Your email address will not be published. Required fields are marked *

Scroll to Top