ಜಿಲ್ಲಾ ಮಹಿಳೆ & ಮಕ್ಕಳ ಕಲ್ಯಾಣ ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 1143 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: WCD 1143 Vacancies Jobs 2024
ವಿವಿಧ ಜಿಲ್ಲೆಗಳ ಜಿಲ್ಲಾ ಮಹಿಳೆ & ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಚಿಕ್ಕಮಗಳೂರು, ಕಲಬುರಗಿ ಹಾಗೂ ಬಾಗಲಕೋಟೆ ಜಿಲ್ಲೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 1143 ಅಂಗನವಾಡಿ ಕಾರ್ಯಕರ್ತೆ & ಸಹಾಯಕಿಯರ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 05-01-2025 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು.
ಚಿಕ್ಕಮಗಳೂರು, ಕಲಬುರಗಿ ಹಾಗೂ ಬಾಗಲಕೋಟೆ ಜಿಲ್ಲೆಯ ಮಹಿಳೆ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.
ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಇಲಾಖೆಯ ಹೆಸರು: ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ
ಹುದ್ದೆಗಳ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು
ಒಟ್ಟು ಹುದ್ದೆಗಳು: 1143
ಕೆಲಸದ ಸ್ಥಳ: ಚಿಕ್ಕಮಗಳೂರು, ಕಲಬುರಗಿ ಹಾಗೂ ಬಾಗಲಕೋಟೆ
ಜಿಲ್ಲೆಯ ಹೆಸರು | ಅಂಗನವಾಡಿ ಕಾರ್ಯಕರ್ತೆಯರು | ಅಂಗನವಾಡಿ ಸಹಾಯಕಿಯರು |
ಚಿಕ್ಕಮಗಳೂರು | 50 | 217 |
ಕಲಬುರಗಿ | 61 | 238 |
ಬಾಗಲಕೋಟೆ | 106 | 471 |
ಕರ್ನಾಟಕ ಸರ್ಕಾರದಿಂದ ನಿಗದಿಪಡಿಸಿದ ವೇತನವನ್ನು ಮಾಸಿಕವಾಗಿ ರೂ. 8000-12000 ವೇತನವನ್ನು ನೀಡಲಾಗುತ್ತದೆ.
ಕಾರ್ಯಕರ್ತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆಯಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು
ಸಹಾಯಕಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆಯಿಂದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕನಿಷ್ಟ 19 ವರ್ಷ ತುಂಬಿರಬೇಕು
ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ ಇರುವುದಿಲ್ಲ.
ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು & ಬೋನಸ್ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ನಲ್ಲಿ ದಿನಾಂಕ 05-01-2025 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 05-01-2025