ಕರ್ನಾಟಕ ಡಾ. ಬಿ. ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 42000/- ADCL Karnataka Jobs 2024
ಕರ್ನಾಟಕದ ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕೇಂದ್ರ ಕಛೇರಿಯಲ್ಲಿ ಖಾಲಿ ಇರುವ ಸಹಾಯಕ ಕಾನೂನು ಅಧಿಕಾರಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಪ್ರಕಟಣೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಲು 29-09-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಇಮೇಲ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ನಿಯಮಗಳ ಅಡಿಯಲ್ಲಿ ಖಾಲಿ ಇರುವ 15 ಹುದ್ದೆಗಳ ಭರ್ತಿಗೆ ZP ಯಿಂದ ಅರ್ಜಿ ಆಹ್ವಾನ
Dr. B. R Ambedkar Development Corporation ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ
ಹುದ್ದೆಗಳ ಹೆಸರು: ಸಹಾಯಕ ಕಾನೂನು ಅಧಿಕಾರಿ
ಹುದ್ದೆಗಳ ಸಂಖ್ಯೆ- 01
ಕೆಲಸದ ಸ್ಥಳ: ಬೆಂಗಳೂರು
ಗುತ್ತಿಗೆಯ ಅವಧಿ:
ಈ ನೇಂಮಕಾತಿಯನ್ನು ಗೌರವಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗುತ್ತದೆ. ಆರಂಭದಲ್ಲಿ 02 ವರ್ಷಗಳ ಕಾಲ ಮಾತ್ರ ತುಂಬಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ/ Salary Scale:
ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ನಿಯಮಾವಳಿಗಳನ್ವಯ ಮಾಸಿಕ ರೂ. 42000/- ವೇತನ ನೀಡಲಾಗುತ್ತದೆ.
Education/ ವಿದ್ಯಾರ್ಹತೆ
ಅಂಗೀಕೃತ ವಿಶ್ವವಿದ್ಯಾಲಯದಿಂದ ಕಾನೂನು ವಿಷಯದಲ್ಲಿ ಪದವಿಯನ್ನು ಮುಗಿಸಿರಬೇಕು. ವಕೀಲಿ ವೃತ್ತಿಯಲ್ಲಿ ನಿಗಮ ಆಡಳಿತ ಮತ್ತು ಈ ಕಾನೂನು ನಿರ್ವಹಣೆಗಳು, ಯೋಜನೆಗಳ ಅನುಷ್ಠಾನ, ಪರಾಮರ್ಶೆ ಮತ್ತು ಆರ್ಥಿಕ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿನ ನಿಗಮಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಸೇವಾ ಅನುಭವ ಇರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit:
ಅಭ್ಯರ್ಥಿಗಳು ಗರಿಷ್ಟ ಅಂದರೇ 80 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Application Fees
ಅರ್ಜಿ ಶುಲ್ಕ ಇರುವುದಿಲ್ಲ
ಶಿಕ್ಷಕರ ತರಬೇತಿ & ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಸೆಕ್ಷನ್ ಆಫೀಸರ್ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಆಯ್ಕೆ ವಿಧಾನ / Selection Method
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ದಿನಾಂಕ 26-09-2024 ರ ಒಳಗಾಗಿ ವ್ಯವಸ್ಥಾಪಕ ನಿರ್ದೇಶಕರು, ಡಾ. ಬಿ. ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಿಶ್ವೇಶ್ವರಯ್ಯ ಚಿಕ್ಕಗೋಪುರ, 9ನೇ ಮಹಡಿ, ಅಂಬೇಡ್ಕರ್ ವೀಧಿ, ಬೆಂಗಳೂರು-560001 ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ದಿನಾಂಕ:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 25-09-2024
ಅಧಿಕೃತ ಲಿಂಕ್/ Official Links: