ಕರ್ನಾಟಕ ಡಾ. ಬಿ. ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನಾಂಕ: ADCL Karnataka Recruitment 2024- Apply now
ಕರ್ನಾಟಕದ ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕೇಂದ್ರ ಕಛೇರಿಯಲ್ಲಿ ಖಾಲಿ ಇರುವ ಸಹಾಯಕ ಕಾನೂನು ಅಧಿಕಾರಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಪ್ರಕಟಣೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಲು 26-09-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಇಮೇಲ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ 33 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 100000/-
Dr. B. R Ambedkar Development Corporation ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಆಹಾರ ನಿಗಮದಲ್ಲಿ ಒಟ್ಟು 15465 ಗುಮಾಸ್ತ & ಇತರೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ
ಹುದ್ದೆಗಳ ಹೆಸರು: ಸಹಾಯಕ ಕಾನೂನು ಅಧಿಕಾರಿ
ಹುದ್ದೆಗಳ ಸಂಖ್ಯೆ- 01
ಕೆಲಸದ ಸ್ಥಳ: ಬೆಂಗಳೂರು
ಗುತ್ತಿಗೆಯ ಅವಧಿ:
ಈ ನೇಂಮಕಾತಿಯನ್ನು ಗೌರವಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗುತ್ತದೆ. ಆರಂಭದಲ್ಲಿ 02 ವರ್ಷಗಳ ಕಾಲ ಮಾತ್ರ ತುಂಬಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ/ Salary Scale:
ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ನಿಯಮಾವಳಿಗಳನ್ವಯ ಮಾಸಿಕ ರೂ. 42000/- ವೇತನ ನೀಡಲಾಗುತ್ತದೆ.
Education/ ವಿದ್ಯಾರ್ಹತೆ
ಅಂಗೀಕೃತ ವಿಶ್ವವಿದ್ಯಾಲಯದಿಂದ ಕಾನೂನು ವಿಷಯದಲ್ಲಿ ಪದವಿಯನ್ನು ಮುಗಿಸಿರಬೇಕು. ವಕೀಲಿ ವೃತ್ತಿಯಲ್ಲಿ ನಿಗಮ ಆಡಳಿತ ಮತ್ತು ಈ ಕಾನೂನು ನಿರ್ವಹಣೆಗಳು, ಯೋಜನೆಗಳ ಅನುಷ್ಠಾನ, ಪರಾಮರ್ಶೆ ಮತ್ತು ಆರ್ಥಿಕ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿನ ನಿಗಮಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಸೇವಾ ಅನುಭವ ಇರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit:
ಅಭ್ಯರ್ಥಿಗಳು ಗರಿಷ್ಟ ಅಂದರೇ 80 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Application Fees
ಅರ್ಜಿ ಶುಲ್ಕ ಇರುವುದಿಲ್ಲ
ಆಯುರ್ವೇದ ಮಹಾವಿದ್ಯಾಲಯದಲ್ಲಿ ಖಾಲಿ ಇರುವ SDA, ಸ್ಟಾಫ್ ನರ್ಸ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಆಯ್ಕೆ ವಿಧಾನ / Selection Method
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ದಿನಾಂಕ 26-09-2024 ರ ಒಳಗಾಗಿ ವ್ಯವಸ್ಥಾಪಕ ನಿರ್ದೇಶಕರು, ಡಾ. ಬಿ. ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಿಶ್ವೇಶ್ವರಯ್ಯ ಚಿಕ್ಕಗೋಪುರ, 9ನೇ ಮಹಡಿ, ಅಂಬೇಡ್ಕರ್ ವೀಧಿ, ಬೆಂಗಳೂರು-560001 ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ದಿನಾಂಕ:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 26-09-2024
ಅಧಿಕೃತ ಲಿಂಕ್/ Official Links: