ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಯಂಗ್ ಪ್ರೊಫೆಶನಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 70000/- Apply for DOLR Jobs 2024
ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ಬರುವ ಭೂ ಸಂಪನ್ಮೂಲ ಇಲಾಖೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಯಂಗ್ ಪ್ರೊಫೆಶನಲ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಇಮೇಲ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 19, 2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಗ್ರಾಮೀಣಾಭಿವೃದ್ಧಿ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಯಂಗ್ ಪ್ರೊಫೆಶನಲ್ (GIS) | 01 |
ಯಂಗ್ ಪ್ರೊಫೆಶನಲ್ (Legal) | 02 |
ಯಂಗ್ ಪ್ರೊಫೆಶನಲ್ (Energy Crops) | 01 |
ಯಂಗ್ ಪ್ರೊಫೆಶನಲ್ (Spring and Development) | 01 |
ಒಟ್ಟು ಹುದ್ದೆಗಳು | 05 |
ವೇತನ ಶ್ರೇಣಿ/ Remuneration:
ಸರ್ಕಾರದ ನಿಯಮಾವಳಿಗಳ ಅನ್ವಯ ಮಾಸಿಕ ರೂ. 70000/- ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ/ Qualification:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಯಂಗ್ ಪ್ರೊಫೆಶನಲ್ (GIS) | ME/ MTech/MSc (GIS/ Geo) |
ಯಂಗ್ ಪ್ರೊಫೆಶನಲ್ (Legal) | Bachelor Degree in Law |
ಯಂಗ್ ಪ್ರೊಫೆಶನಲ್ (Energy Crops) | MSc in Agri/Horti |
ಯಂಗ್ ಪ್ರೊಫೆಶನಲ್ (Spring and Development) | PG in Hydrology/ Geology |
ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಯೋಮಿತಿ/ Age Limit
ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Processing Fees:
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ ಹೇಗಿರುತ್ತೆ/ Selection Method:
ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನ ಭರ್ತಿ ಮಾಡಿ ಅದರ ಜೊತೆಗೆ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಪಿಡಿಎಫ್ ರೂಪದಲ್ಲಿ ಬದಲಿಸಿ ದಿನಾಂಕ 19-07-2024 ರ ಒಳಗಾಗಿ usadmn-dolr@gov.in ಇಮೇಲ್ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 18-06-2024
ಹಾರ್ಡ್ ಕಾಪಿಯನ್ನು ಕಳುಹಿಸುವ ಕೊನೆಯ ದಿನಾಂಕ: 19-07-2024
ಅಧಿಕೃತ ಲಿಂಕ್/ Official Links: