ಕೆಇಎ ಯಿಂದ ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 VAO ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ: Apply for KEA VAO 2024
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು KEA ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 15-05-2024 ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕ್ಲರ್ಕ್ & ಉಪನ್ಯಾಸಕ ಹುದ್ದೆಗಳ ಭರ್ತಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನ
ಹುದ್ದೆಗಳ ವಿವರವನ್ನು ಗಮನಿಸಿ:
ಇಲಾಖೆ | ಕಂದಾಯ ಇಲಾಖೆ |
ಹುದ್ದೆಯ ಹೆಸರು | ಗ್ರಾಮ ಆಡಳಿತ ಅಧಿಕಾರಿ |
ಹುದ್ದೆಗಳ ಸಂಖ್ಯೆ | 1000 |
ಕೆಲಸದ ಸ್ಥಳ | ಕರ್ನಾಟಕದ ಎಲ್ಲ ಜಿಲ್ಲೆಗಳು |
ಜಿಲ್ಲಾವಾರು & ಕೆಟೆಗೆರಿವಾರು ಹುದ್ದೆಗಳ ವಿವರಗಳಿಗೆ ಕೆಳಗೆ ನೀಡಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವೇತನ ಶ್ರೇಣಿ:
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಮೂಲವೇತನವನ್ನು ರೂ. 21400-42000 ಕ್ಕೆ ನಿಗದಿಪಡಿಸಲಾಗಿದೆ. ಈ ಮೂಲ ವೇತನದ ಜೊತೆಗೆ ತುಟ್ಟಿಭತ್ಯೆ, ಮನೆ ಬಾಡಿಗೆ ಭತ್ಯೆ ಮುಂತಾದ ಸೌಲಭ್ಯಗಳು ದೊರೆಯುತ್ತವೆ.
ವಿದ್ಯಾರ್ಹತೆ ಏನಿರಬೇಕು?
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು
ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, 2ಎ, 2ಬಿ, 3ಎ & 3ಬಿ ಪ್ರವರ್ಗಗಳಿಗೆ | ರೂ. 750/- |
ಎಸ್.ಸಿ ,ಎಸ್.ಟಿ, ಪ್ರವರ್ಗ 1, ವಿಕಲಚೇತನರು & ಮಾಜಿ ಸೈನಿಕರು | ರೂ. 500/- |
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹ & ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಅಧಿಕೃತ ವೆಬ್ಸೈಟ್ kea.kar.nic.in ವೆಬ್ಸೈಟ್ ನಲ್ಲಿ ದಿನಾಂಕ: 04-03-2024 ರಿಂದ 03-04-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಆಯುಷ್ ಇಲಾಖೆಯಲ್ಲಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 04-03-2024
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 15-05-2024
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 18-05-2024
ಅಧಿಕೃತ ಲಿಂಕ್/ Official Links:
Pingback: ಕೇಂದ್ರೀಯ ಆಯುರ್ವೇದಿಕ್ ಪರಿಷತ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: ವೇತನ ರೂ. 60000/- CCRAS Notificatio