ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 1202 ಅಸಿಸ್ಟೆಂಟ್ ಲೋಕೊಪೈಲೆಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: Apply Online RRC SER ASP 2024
ಕೇಂದ್ರ ರೈಲ್ವೇ ಇಲಾಖೆಯ ಆಗ್ನೇಯ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೋಕೊ ಪೈಲೆಟ್, ಟ್ರೈನ್ ಮ್ಯಾನೇಜರ್ ಸೇರಿದಂತೆ ಒಟ್ಟು 1202 ಹುದ್ದೆಗಳ ಇಲಾಖಾ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 12-06-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 33863 ಹುದ್ದೆಗಳ ಭರ್ತಿಗೆ ಕೂಡಲೇ ಅರ್ಜಿ ಸಲ್ಲಿಸಿ
South Eastern Railway ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಅಸಿಸ್ಟೆಂಟ್ ಲೋಕೊ ಪೈಲೆಟ್ | 827 ಹುದ್ದೆಗಳು |
ಟ್ರೈನ್ ಮ್ಯಾನೇಝರ್ | 375 ಹುದ್ದೆಗಳು |
ಒಟ್ಟು ಹುದ್ದೆಗಳು | 1202 |
ವೇತನ ಶ್ರೇಣಿ:
ಹುದ್ದೆಯ ಹೆಸರು | ವೇತನ ಶ್ರೇಣಿ |
ಅಸಿಸ್ಟೆಂಟ್ ಲೋಕೊ ಪೈಲೆಟ್ | 5200-20200 |
ಟ್ರೈನ್ ಮ್ಯಾನೇಜರ್ | 5200-20200 |
ಮೂಲವೇತನದ ಜೊತೆಗೆ ಡಿಎ, ಎಚ್.ಆರ್.ಎ & ಇನ್ನಿತರ ಸೌಲಭ್ಯಗಳು ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು:
ಅಸಿಸ್ಟೆಂಟ್ ಲೋಕೊ ಪೈಲೆಟ್:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ & ಐಟಿಐ ಮುಗಿಸಿರಬೇಕು.
ಟ್ರೈನ್ ಮ್ಯಾನೇಜರ್:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು.
ಅರ್ಜಿ ಶುಲ್ಕ :
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 47 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತರು ಅರ್ಜಿಗಳನ್ನು ದಿನಾಂಕ 13.05.2024 ರಿಂದ 12.06.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.rrcser.co.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 312 ಹುದ್ದೆಗಳ ನೇರ ನೇಮಕಾತಿಗೆ UPSC ಯಿಂದ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 13-05-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-06-2024
Important Links/ ಪ್ರಮುಖ ಲಿಂಕುಗಳು:
Pingback: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian Post MMS Grp C Jobs 2024 - EduTech Kannada