ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: BDA Recruitment 2023
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಗ್ರೂಪ್ ಸಿ ಬೆರಳಚ್ಚುಗಾರ & ಶೀಘ್ರಲಿಪಿಗಾರ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 08-12-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸಿಸ್ಟೆಂಟ್ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ನಾಗರಿಕ ವಿಮಾನಯಾನ ಇಲಾಖೆಯಲ್ಲಿ ಖಾಲಿ ಇರುವ ಗುಮಾಸ್ತ & ಹಿರಿಯ ನಿರೀಕ್ಷಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಬೆರಳಚ್ಚುಗಾರ | 01 ಹುದ್ದೆ |
ಶೀಘ್ರಲಿಪಿಗಾರ | 01 ಹುದ್ದೆ |
ಒಟ್ಟು ಹುದ್ದೆಗಳು | 02 |
ವೇತನ ಶ್ರೇಣಿ:
ಹುದ್ದೆಯ ಹೆಸರು | ವೇತನ ಶ್ರೇಣಿ |
ಬೆರಳಚ್ಚುಗಾರ | 21400-42000 |
ಶೀಘ್ರಲಿಪಿಗಾರ | 27650-52650 |
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು:
ಬೆರಳಚ್ಚುಗಾರ:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಪಿಯುಸಿ ವಿದ್ಯಾರ್ಹತೆಯನ್ನು ಮುಗಿಸಿರಬೇಕು & ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ ಕನ್ನಡ & ಇಂಗ್ಲೀಷ್ ಸೀನಿಯರ್ ಗ್ರೇಡ್ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಶೀಘ್ರಲಿಪಿಗಾರ:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಪಿಯುಸಿ ವಿದ್ಯಾರ್ಹತೆಯನ್ನು ಮುಗಿಸಿರಬೇಕು & ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ ಕನ್ನಡ & ಇಂಗ್ಲೀಷ್ ಸೀನಿಯರ್ ಗ್ರೇಡ್ ಶೀಘ್ರಲಿಪಿ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ :
ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 08.12.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 09-11-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-12-2023
Important Links/ ಪ್ರಮುಖ ಲಿಂಕುಗಳು:
Pingback: ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಗುಮಾಸ್ತ, ಸಹಾಯಕ ಪ್ರಾಧ್ಯಾಪಕ, ಸಾಂಖ್ಯಿಕ ಅಧಿಕಾರಿ ಸೇರಿ ವಿವಿಧ ಹುದ್ದೆ
Pingback: ಕ್ಲರ್ಕ್, ಸೆಕ್ಷನ್ ಆಫೀಸರ್ & MTS ಸೇರಿ 154 ಹುದ್ದೆಗಳ ನೇರ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- NEHU Recruitment 2023 - EduT