ಮಹಿಳಾ  ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕೇಸ್ ವರ್ಕರ್, ಆಡಳಿತಗಾರ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: BGM Sakhi Recruitment 2024

Click to Share

ಮಹಿಳಾ  ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕೇಸ್ ವರ್ಕರ್, ಆಡಳಿತಗಾರ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: BGM Sakhi Recruitment 2024

ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ವತಿಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಚಿಕ್ಕೊಡಿ ತಾಲೂಕಿನಲ್ಲಿ ಹೊಸದಾಗಿ ಪ್ರಾರಂಭವಾಗಿರುವ ‘ಸಖಿ’ ಒನ್ ಸ್ಟಾಪ್ ಸೆಂಟರ್ ನಲ್ಲಿ ಖಾಲಿ ಇರುವ ಸೆಂಟರ್ ಅಡ್ಮಿನಿಸ್ಟ್ರೇಟರ್, ಕೇಸ್ ವರ್ಕರ್, ಕ್ಲೀನರ್/ ಸೆಕ್ಯೂರಿಟಿ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 23-08-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಖುದ್ದಾಗಿ ಅಥವಾ Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ರೇಷ್ಮೆ ಮಂಡಳಿ, ಮೈಸೂರಿನಲ್ಲಿ ಖಾಲಿ ಇರುವ ಯೋಜನಾ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 2006  ಗ್ರೇಡ್ ಸಿ & ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

 

ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸೆಂಟರ್ ಅಡ್ಮಿನಿಸ್ಟ್ರೇಟರ್ 01
ಕೌನ್ಸಲರ್ 01
ಕೇಸ್ ವರ್ಕರ್ 02
ಲಾಯರ್ 02
ಮಲ್ಟಿಪರ್ಪಸ್ ಕ್ಲೀನರ್/ ಸೆಕ್ಯೂರಿಟಿ 02

ವೇತನ ಶ್ರೇಣಿ:

ಉಪ ನಿರ್ದೇಶಕರು, ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ, ಬೆಳಗಾವಿ ಜಿಲ್ಲೆಯ ವತಿಯಿಂದ ನಿಗದಿಪಡಿಸಿದ ಮಾಸಿಕ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ನಿಗದಿಪಡಿಸಿದ ವಿದ್ಯಾರ್ಹತೆಯನ್ನು ಮುಗಿಸಿರಬೇಕು. ವಿದ್ಯಾಭ್ಯಾಸದ ಕುರಿತು ಹೆಚ್ಚಿನ ವಿವರಗಳಿಗೆ ಉಪನಿರ್ದೇಶಕರು, ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ಕಛೇರಿಗೆ ಸಂಪರ್ಕಿಸಿ.

ಅರ್ಜಿ ಶುಲ್ಕ  :

ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 45 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 23.08.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕದ ವಿಶ್ವವಿದ್ಯಾಲಯದ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಪಿಯು ಉಪನ್ಯಾಸಕರು & ಬೋಧನಾ ಸಹಾಯಕರು ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-08-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:


Click to Share
Bookmark the permalink.

About edutechkannada.com

www.edutechkannada.com Educator

2 Responses to ಮಹಿಳಾ  ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕೇಸ್ ವರ್ಕರ್, ಆಡಳಿತಗಾರ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: BGM Sakhi Recruitment 2024

  1. Pingback: ಕರ್ನಾಟಕ ಹಿಂದೂಳಿದ ವರ್ಗಗಳ ಕಲ್ಯಾಣ(OBC) ಇಲಾಖೆಯಲ್ಲಿ  ಖಾಲಿ ಇರುವ 825 ಹಾಸ್ಟೆಲ್ ವಾರ್ಡನ್ & ಇತರೆ ಹುದ್ದೆಗಳ ನೇಮ

  2. Pingback: ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ 58 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 32000/- BMRCL ASO Jobs 2024 - EduTech Kannada

Leave a Reply

Your email address will not be published. Required fields are marked *