ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 164000/- BMRCL GM & DGM Vacancies 2024
ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಬೆಂಗಳೂರು ಮೆಟ್ರೊ ರೈಲ್ ಕಾರ್ಪೊರೇಶನ್ ನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿರುವುದು. BMRCL ನಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್ & ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು BMRCL ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 16-08-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಬೆಂಗಳೂರು ಮೆಟ್ರೊ ರೈಲ್ ಕಾರ್ಪೊರೇಶನ್ (BMRCL) ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಪ್ರಧಾನ ವ್ಯವಸ್ಥಾಪಕರು (HR) | 01 ಹುದ್ದೆಗಳು |
ಉಪ ಪ್ರಧಾನ ವ್ಯವಸ್ಥಾಪಕರು (HR) | 02 ಹುದ್ದೆಗಳು |
ಒಟ್ಟು ಹುದ್ದೆಗಳು | 03 ಹುದ್ದೆಗಳು |
ಕ್ರೂಢಿಕೃತ ವೇತನ:
ಪ್ರತಿ ತಿಂಗಳು ಕೆಳಗಿನಂತೆ ವೇತನ ನೀಡಲಾಗುತ್ತದೆ.
ಜನರಲ್ ಮ್ಯಾನೇಜರ್ | 206250/- |
ಡೆಪ್ಯೂಟಿ ಜನರಲ್ ಮ್ಯಾನೇಜರ್ | 164000/- |
ವಿದ್ಯಾರ್ಹತೆ ಏನಿರಬೇಕು?
ಸಂಬಂಧಿಸಿದ ವಿಷಯದಲ್ಲಿ ಪದವಿಯನ್ನು ಪೂರ್ಣಕಾಲಿಕವಾಗಿ ಮುಗಿಸಿರಬೇಕು.
ಸಂಬಂಧಿಸಿದ ಕ್ಷೇತ್ರದಲ್ಲಿ 10-15 ವರ್ಷಗಳ ಅನುಭವವನ್ನು ಹೊಂದಿರಬೇಕು.
ಕನ್ನಡವನ್ನು ಸುಲಲಿತವಾಗಿ ಮಾತನಾಡುವ ಕೌಶಲ್ಯ ಇರಬೇಕು.
ವಯೋಮಿತಿ:
ಅಭ್ಯರ್ಥಿಗಳು ಗರಿಷ್ಟ ಅಂದರೇ 55 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಆಯ್ಕೆ ವಿಧಾನ ಹೇಗಿರುತ್ತೆ?
ಇಮೇಲ್/ ಮೆಸೆಜ್ ಮೂಲಕ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಸಂದರ್ಶನದಲ್ಲಿ ತಾವು ಪಡೆದ ಅಂಕಗಳ ಮೇಲೆ ಆಯ್ಕೆ ನಡೆಯುತ್ತೆ.
ಅರ್ಜಿ ಹಾಕುವುದು ಹೇಗೆ?
BMRCL ಅಧಿಕೃತ ವೆಬ್ಸೈಟ್ ನಲ್ಲಿ ಮೊದಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಂತರ ಅದರ ಮುದ್ರಿತ ಪ್ರತಿಯ ಜೊತೆಗೆ ಎಲ್ಲ ಅಗತ್ಯ ದಾಖಲೆಗಳನ್ನು ಲಗತ್ತಿಸಿ General Manager, BMRCL, III Floor, BMTC Complex, K H Road, Shanthinagar, Bengaluru 560027 ವಿಳಾಸಕ್ಕೆ ಕೊನೆಯ ದಿನಾಂಕದ ಒಳಗಾಗಿ ಅಂಚೆಯ ಮೂಲಕ ಕಳುಹಿಸಬೇಕು.
ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 1940 ಹುದ್ದೆಗಳಿಗೆ ಕನ್ನಡಿಗರಿಂದ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 16-08-2024
ಹಾರ್ಡ್ ಕಾಪಿಯನ್ನು ಕಳುಹಿಸುವ ಕೊನೆಯ ದಿನಾಂಕ: 20-08-2024
ಅಧಿಕೃತ ಲಿಂಕ್/ Official Links:
Pingback: ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 1376 ಪ್ಯಾರಾ ಮೆಡಿಕಲ್ & ಲ್ಯಾಬ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂ
Pingback: ಕರ್ನಾಟಕ WCD ಇಲಾಖೆಯಲ್ಲಿ ಖಾಲಿ ಇರುವ 200 ವರ್ಕರ್ & ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WCD Dharwad Jobs 2024 - EduTech Kannada
Pingback: ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 312 JTO & STO ಹುದ್ದೆಗಳಿಗೆ ಅರ್ಜಿ ಆಹ್ವಾನ: SSC STO & JTO Jobs 2024 - EduTech Kannada