ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 2503 ಗ್ರೂಪ್‌ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: 

Click to Share

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 2503 ನಿರ್ವಾಹಕ & ಸಹಾಯಕ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ:  BMTC 2503 RECRUITMENT 2024

ಕರ್ನಾಟಕ ಸಾರಿಗೆ ಇಲಾಖೆಯ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. BMTC ಯಲ್ಲಿ ಖಾಲಿ ಇರುವ ನಿರ್ವಾಹಕ & ಸಹಾಯಕ ಲೆಕ್ಕಿಗ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಒಟ್ಟು 2503 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದ್ದು,  ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು KEA ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 18-05-2024 ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕಾಫಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಆಪರೇಟರ್ ಹುದ್ದೆಗಳಿಗೆ ಯಾವುದೇ ಪದವಿಧರರಿಂದ ಅರ್ಜಿ ಆಹ್ವಾನ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (BMTC) ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕದ ವಸತಿ ಶಾಲೆಯಲ್ಲಿ ಖಾಲಿ ಇರುವ ಕ್ಲರ್ಕ್ & ಚಾಲಕರು ಸೇರಿ ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SSBJ Jobs 2024

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ನಿರ್ವಾಹಕ 2500
ಸಹಾಯಕ ಲೆಕ್ಕಿಗ 01
ಸ್ಟಾಫ್ ನರ್ಸ್ 01
ಫಾರ್ಮಾಸಿಸ್ಟ್ 01
ಒಟ್ಟು ಹುದ್ದೆಗಳು 2503

ವೇತನ ಶ್ರೇಣಿ:

ಕರ್ನಾಟಕ ಸರ್ಕಾರದ ನಿಯಮಾವಳಿಗಳ ಅನ್ವಯ ಹುದ್ದೆಗಳ ಅನುಸಾರ ಮೂಲ ವೇತನ ನಿಗದಿಪಡಿಸಲಾಗಿದೆ & ತುಟ್ಟಿಭತ್ಯೆ, ಮನೆಬಾಡಿಗೆ ಭತ್ಯೆ ಸೇರಿದಂತೆ ವಿವಿಧ ಸೌಲಭ್ಯಗಳು ನಿಯಮಾನುಸಾರ ದೊರೆಯುತ್ತವೆ.

ವಿದ್ಯಾರ್ಹತೆ ಏನಿರಬೇಕು?

ಹುದ್ದೆಗಳಿಗೆ ಅನುಸಾರ ಅಂಗೀಕೃತ ಬೋರ್ಡ್/  ವಿಶ್ವವಿದ್ಯಾಲಯದಿಂದ  ಹತ್ತನೇ ತರಗತಿ, ಪಿಯುಸಿ, ಪದವಿ, ನರ್ಸಿಂಗ್, ಫಾರ್ಮಾಸಿ ಮುಗಿಸಿದವರಿಗೆ  ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು

ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

ಸಾಮಾನ್ಯ ವರ್ಗ ರೂ. 500/-
2ಎ, 2ಬಿ, 3ಎ & 3ಬಿ ರೂ. 300/-
ಎಸ್.ಸಿ ,ಎಸ್.ಟಿ & ಪ್ರವರ್ಗ 1 ರೂ. 200/-
ವಿಕಲಚೇತನರು & ಮಾಜಿ ಸೈನಿಕರು ರೂ. 100/-

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆ/ ಕೌಶಲ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು KEA ಅಧಿಕೃತ ವೆಬ್ಸೈಟ್ kea.kar.nic.in  ವೆಬ್ಸೈಟ್ ನಲ್ಲಿ ದಿನಾಂಕ 18-05-2024 ರ ಒಳಗಾಗಿ  ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಕರ್ನಾಟಕದಲ್ಲಿರುವ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಸಂಸ್ಥೆಯಲ್ಲಿ ಖಾಲಿ ಇರುವ ಕಲ್ಯಾಣ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: BRBNMPL Jobs 2024

ಅರ್ಜಿ ಸಲ್ಲಿಸುವ ದಿನಾಂಕಗಳು:

ಪ್ರಾರಂಭದ ದಿನಾಂಕ: ಶೀಘ್ರದಲ್ಲೆ

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 18-05-2024

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: ಶೀಘ್ರದಲ್ಲೆ

ಅಧಿಕೃತ ಲಿಂಕ್/ Official Links:

Notification

Apply Online

Official Website


Click to Share
Bookmark the permalink.

About edutechkannada.com

www.edutechkannada.com Educator

Leave a Reply

Your email address will not be published. Required fields are marked *