ಬೆಂಗಳೂರಿನಲ್ಲಿ HK ವೃಂದದ 214 ಹುದ್ದೆಗಳ ಭರ್ತಿಗೆ ಪಿಯುಸಿ ಆದವರಿಂದ ಅರ್ಜಿ ಆಹ್ವಾನ |BMTC Hk Jobs 2024
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. BMTC ಯಲ್ಲಿ ಖಾಲಿ ಇರುವ ಹೈ.ಕ ವೃಂದದ ನಿರ್ವಾಹಕ (ದರ್ಜೆ 3 ಮೇಲ್ವಿಚಾರಕೇತರರು) ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಒಟ್ಟು 214 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದ್ದು, ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು KEA ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 19-05-2024 ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (BMTC) ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರವನ್ನು ಗಮನಿಸಿ:
ವರ್ಗ | ಹುದ್ದೆಗಳ ಸಂಖ್ಯೆ |
SC | 34 |
ST | 14 |
Cat 1 | 08 |
2A | 30 |
2B | 08 |
3A | 08 |
3A (Backlog) | 08 |
3B | 10 |
Gm | 87 |
Total | 214 |
ವೇತನ ಶ್ರೇಣಿ:
ಕರ್ನಾಟಕ ಸರ್ಕಾರದ ನಿಯಮಾವಳಿಗಳ ಅನ್ವಯ ಹುದ್ದೆಗಳ ಅನುಸಾರ ಮೂಲ ವೇತನ ನಿಗದಿಪಡಿಸಲಾಗಿದೆ & ತುಟ್ಟಿಭತ್ಯೆ, ಮನೆಬಾಡಿಗೆ ಭತ್ಯೆ ಸೇರಿದಂತೆ ವಿವಿಧ ಸೌಲಭ್ಯಗಳು ನಿಯಮಾನುಸಾರ ದೊರೆಯುತ್ತವೆ.
ವಿದ್ಯಾರ್ಹತೆ ಏನಿರಬೇಕು?
ಹುದ್ದೆಗಳಿಗೆ ಅನುಸಾರ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ 12ನೇ ತರಗತಿ/ ಪಿಯುಸಿ/ ಡಿಪ್ಲೋಮಾ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವಯೋಮಿತಿ:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು
ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ | ರೂ. 500/- |
2ಎ, 2ಬಿ, 3ಎ & 3ಬಿ | ರೂ. 300/- |
ಎಸ್.ಸಿ ,ಎಸ್.ಟಿ & ಪ್ರವರ್ಗ 1 | ರೂ. 200/- |
ವಿಕಲಚೇತನರು & ಮಾಜಿ ಸೈನಿಕರು | ರೂ. 100/- |
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆ/ ಕೌಶಲ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು KEA ಅಧಿಕೃತ ವೆಬ್ಸೈಟ್ kea.kar.nic.in ವೆಬ್ಸೈಟ್ ನಲ್ಲಿ 19-05-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಂಟಲಿಜೆನ್ಸ್ ಬ್ಯೂರೋ ದಲ್ಲಿ ಖಾಲಿ ಇರುವ 660 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ದಿನಾಂಕಗಳು:
ಪ್ರಾರಂಭದ ದಿನಾಂಕ: 19-04-2024
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 19-05-2024
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 19-05-2024
ಅರ್ಜಿ ಸಲ್ಲಿಸಿ/ Apply Now
Pingback: ವಿಮಾನ ಇಲಾಖೆಯಲ್ಲಿ ಖಾಲಿ ಇರುವ 490 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ- AAI 490 Vacancies Jobs 2024 - EduTech Kannada
Pingback: ಭಾರತೀಯ ಜೀವ ವಿಮಾ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: LIC dpo Recruitment 2024 - EduTech Kannada