ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: Canara Bank Recruitment 2024

Click to Share

ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: Canara Bank Recruitment 2024

ಕೆನರಾ ಬ್ಯಾಂಕ್ ನಲ್ಲಿ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಚೀಫ್ ಎಕೊನಾಮಿಸ್ಟ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 28-07-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

KPSC ಯಿಂದ 384 ಗ್ರೂಪ್ ಎ & ಬಿ ಗೆಜೆಟೆಡ್ ಪ್ರೊಬೇಶನರಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

Canara Bank ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ:

ಇಲಾಖೆ/ ಸಂಸ್ಥೆ: ಕೆನರಾ ಬ್ಯಾಂಕ್

ಹುದ್ದೆಗಳ ಹೆಸರು: ಚೀಫ್ ಎಕೊನಾಮಿಸ್ಟ್

ಹುದ್ದೆಗಳ ಸಂಖ್ಯೆ- 01

ಕೆಲಸದ ಸ್ಥಳ: ಬೆಂಗಳೂರು

ವೇತನ ಶ್ರೇಣಿ:

ಕೆನರಾ ಬ್ಯಾಂಕ್ ನ ನಿಯಮಾವಳಿಗಳನ್ವಯ ಮಾಸಿಕ ಕ್ರೂಢಿಕೃತ ವೇತನ ನೀಡಲಾಗತ್ತದೆ.

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ Economics/ Econometrics ವಿಷಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ  :

ಅರ್ಜಿ ಶುಲ್ಕವಿರುವುದಿಲ್ಲ.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 35 ವರ್ಷ ಪೂರೈಸಿರಬೇಕು & 55 ವರ್ಷವನ್ನು ಮೀರಿರಬಾರದು.

 

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತರು ಅರ್ಜಿಗಳನ್ನು ದಿನಾಂಕ 08.07.2024 ರಿಂದ 28.07.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.canarabank.com ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಕರ್ನಾಟಕ ಹಿಂದೂಳಿದ ವರ್ಗಗಳ ಕಲ್ಯಾಣ(OBC) ಇಲಾಖೆಯಲ್ಲಿ  ಖಾಲಿ ಇರುವ 825 ಹಾಸ್ಟೆಲ್ ವಾರ್ಡನ್ & ಇತರೆ ಹುದ್ದೆಗಳ ನೇಮಕಾತಿ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 08-07-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-07-2024

Important Links/ ಪ್ರಮುಖ ಲಿಂಕುಗಳು:

ಅರ್ಜಿ ನಮೂನೆ/ Application Form

ನೋಟಿಫಿಕೇಶನ್/ Notification


Click to Share
Bookmark the permalink.

About edutechkannada.com

www.edutechkannada.com Educator

Leave a Reply

Your email address will not be published. Required fields are marked *