ಸಿಬಿಐ- ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CBI Assistant Programmer Recruitment 2024
ಕೇಂದ್ರ ಲೋಕಸೇವಾ ಆಯೋಗದಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಪ್ರೊಗ್ರಾಮರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 28-11-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು.
Central Bureau of Investigation ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.
ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ವಿಮಾನ ಇಲಾಖೆಯಲ್ಲಿ ಖಾಲಿ ಇರುವ 90 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕೇಂದ್ರೀಯ ತನಿಖಾ ಸಂಸ್ಥೆ
ಹುದ್ದೆಗಳ ಹೆಸರು: ಅಸಿಸ್ಟೆಂಟ್ ಪ್ರೊಗ್ರಾಮರ್
ಹುದ್ದೆಗಳ ಸಂಖ್ಯೆ: 27 ಹುದ್ದೆಗಳು
ವರ್ಗವಾರು ಹುದ್ದೆಗಳ ವಿವರ:
ವರ್ಗ | ಹುದ್ದೆಗಳ ಸಂಖ್ಯೆ |
ಸಾಮಾನ್ಯ ವರ್ಗ | 08 |
EWS | 04 |
OBC | 09 |
SC | 04 |
ST | 02 |
Total Posts | 27 |
ವೇತನ ಶ್ರೇಣಿ:
ಕೇಂದ್ರ ಸರ್ಕಾರದ ಏಳನೇ ವೇತನ ನಿಯಮಾವಳಿಗಳ ಅನ್ವಯ ಲೆವೆಲ್ 7ಮೂಲ ವೇತನ ನಿಗದಿಪಡಿಸಲಾಗಿದೆ.
ಈ ಮೂಲವೇತನದ ಜೊತೆಗೆ ಕೇಂದ್ರ ಸರ್ಕಾರದ ನಿಯಮಾನುಸಾರ ಡಿಎ, ಎಚ್.ಆರ್.ಎ & ಇನ್ನಿತರ ಸೌಲಭ್ಯ ದೊರೆಯಲಿವೆ.
ವಿದ್ಯಾರ್ಹತೆ ಏನಿರಬೇಕು?
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ Computer Application/ Computer Science/ Master of Technology ಸ್ನಾತಕೋತ್ತರ ಪದವಿ ಮುಗಿಸಿರಬೇಕು.
ವಯೋಮಿತಿ/ Age limit:
ಕನಿಷ್ಟ ವಯೋಮಿತಿ : 18 ವರ್ಷ ಪೂರೈಸಿರಬೇಕು
ಗರಿಷ್ಟ ವಯೋಮಿತಿ: 30 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fees:
ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 25/-
ಮಹಿಳೆಯರು/ ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಕೆಳಕಂಡಂತೆ ಆಯ್ಕೆ ಮಾಡಲಾಗುತ್ತದೆ.
ಲಿಖಿತ ಪರೀಕ್ಷೆ / Written Test
ಕೌಶಲ್ಯ ಪರೀಕ್ಷೆ (Skill Test)
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ONLINE ಅರ್ಜಿಗಳನ್ನು ದಿನಾಂಕ 09.11.2024 ರಿಂದ 28.11.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು UPSCಯ ವೆಬ್ ಸೈಟ್ www.upsconline.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಹಾಕಿ
ಸೈನಿಕ ಶಾಲೆಯಲ್ಲಿ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 40000/-
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 09-11-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-11-2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 28-11-2024
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Download
ಅರ್ಜಿ ಸಲ್ಲಿಸಿ/ Apply Online: Click here