ಪ್ರೌಢ ಶಿಕ್ಷಣ ಮಂಡಳಿಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಸೆಕ್ರೆಟರಿ, ಜೂನಿಯರ್ ಅಕೌಂಟೆಂಟ್ & ಜೆಇ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: CBSE Grp A, B & C Jobs 2024
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯಲ್ಲಿ ಖಾಲಿ ಇರುವ ಗ್ರೂಪ್ ಎ, ಬಿ & ಸಿ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. CBSE ನಲ್ಲಿ ಖಾಲಿ ಇರುವ ಜೂನಿಯರ್ ಅಕೌಂಟೆಂಟ್, ಅಸಿಸ್ಟೆಂಟ್ ಸೆಕ್ರೆಟರಿ & ಅಕೌಂಟೆಂಟ್ ಸೇರಿದಂತೆ ಒಟ್ಟು 118 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 11-04-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಇಂಟಲಿಜೆನ್ಸ್ ಬ್ಯೂರೋ ದಲ್ಲಿ ಖಾಲಿ ಇರುವ 660 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: IB Recruitment 2024
Central Board of Secondary Education (CBSE) ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ:
ಇಲಾಖೆ/ ಸಂಸ್ಥೆ: Central Board of Secondary Education
ಹುದ್ದೆಗಳ ಹೆಸರು: Group A, B & C
ಹುದ್ದೆಗಳ ಸಂಖ್ಯೆ- 118
ಕೆಲಸದ ಸ್ಥಳ: All India
ಹುದ್ದೆಗಳ ಹಂಚಿಕೆ/ Vacancy Details:
ಅಸಿಸ್ಟೆಂಟ್ ಸೆಕ್ರೆಟರಿ (ಆಡಳಿತ) | 18 |
ಅಸಿಸ್ಟೆಂಟ್ ಸೆಕ್ರೆಟರಿ (ಅಕಾಡೆಮಿಕ್ಸ್) | 16 |
ಅಸಿಸ್ಟೆಂಟ್ ಸೆಕ್ರೆಟರಿ (ಕೌಶಲ್ಯ ಶಿಕ್ಷಣ) | 08 |
ಅಸಿಸ್ಟೆಂಟ್ ಸೆಕ್ರೆಟರಿ (ತರಬೇತಿ) | 22 |
ಅಕೌಂಟ್ಸ್ ಆಫೀಸರ್ | 03 |
ಜೂನಿಯರ್ ಇಂಜಿನಿಯರ್ | 17 |
ಜೂನಿಯರ್ ಟ್ರಾನ್ಸ್ಲೇಷನ್ ಆಫೀಸರ್ | 07 |
ಅಕೌಂಟೆಂಟ್ | 07 |
ಜೂನಿಯರ್ ಅಕೌಂಟೆಂಟ್ | 20 |
ಒಟ್ಟು ಹುದ್ದೆಗಳು | 118 |
ವೇತನ ಶ್ರೇಣಿ:
ಕೇಂದ್ರ ಸರ್ಕಾರದ ನಿಯಮಾವಳಿಗಳ ಪ್ರಕಾರ ವೇತನ & ಭತ್ಯೆಗಳು ದೊರೆಯುತ್ತವೆ.
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ನಿಗದಿಪಡಿಸಿದ ವಿಷಯದಲ್ಲಿ 12ನೇ ತರಗತಿ/ ಪದವಿ/ ಸ್ನಾತಕೋತ್ತರ ಪದವಿ/ ಡಿಪ್ಲೋಮಾ/ ಬಿಇ/ ಬಿಟೆಕ್/ ಮಂತಾದ ವಿದ್ಯಾರ್ಹತೆ ಮುಗಿಸಿದವರಿಗ ಉದ್ಯೋಗಾವಕಾಶಗಳು ಇವೆ. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ :
ಗ್ರೂಪ್ ಎ ಹುದ್ದೆಗಳಿಗೆ: ರೂ. 1500/-
ಗ್ರೂಪ್ ಬಿ ಹುದ್ದೆಗಳಿಗೆ: ರೂ. 800/-
ಪ.ಜಾ/ ಪಪಂ/ ಮಹಿಳೆ/ Ex-SM/ PwBD/ CBSC ಯ ಖಾಯಂ ಉದ್ಯೋಗಿಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ.
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತರು ಅರ್ಜಿಗಳನ್ನು ದಿನಾಂಕ 12.03.2024 ರಿಂದ 11.04.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.cbsc.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 12-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-04-2024
Important Links/ ಪ್ರಮುಖ ಲಿಂಕುಗಳು:
Pingback: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನ: IPPB Executive Apply
Pingback: ವಿಮಾನ ಇಲಾಖೆಯಲ್ಲಿ ಖಾಲಿ ಇರುವ 490 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ- AAI 490 Vacancies Jobs 2024 - EduTech Kannada