ಕರ್ನಾಟಕದ ಕಾಫಿ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 58000/- CCRI Recruitment 2024- today is last day to apply
ಕೇಂದ್ರಿಯ ಕಾಫಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಸಂಶೋಧನಾ ಸಹಾಯಕ ಹಾಗೂ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 23-09-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
Central Coffee Research Institute ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ನಿಯಮಗಳ ಅಡಿಯಲ್ಲಿ ಖಾಲಿ ಇರುವ 15 ಹುದ್ದೆಗಳ ಭರ್ತಿಗೆ ZP ಯಿಂದ ಅರ್ಜಿ ಆಹ್ವಾನ
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ರಿಸರ್ಚ್ ಅಸೋಸಿಯೇಟ್ | 01 |
ಸೀನಿಯರ್ ರಿಸರ್ಚ್ ಫೆಲೋ | 02 |
ಪ್ರಾಜೆಕ್ಟ್ ಅಸೋಸಿಯೇಟ್ | 01 |
ಒಟ್ಟು ಹುದ್ದೆಗಳು | 04 |
ವೇತನ ಶ್ರೇಣಿ:
Central Coffee Research Institute ನಿಯಮಾವಳಿಗಳ ಅನ್ವಯ ವೇತನ ನೀಡಲಾಗತ್ತದೆ.
ಹುದ್ದೆಯ ಹೆಸರು | ವೇತನ |
ರಿಸರ್ಚ್ ಅಸೋಸಿಯೇಟ್ | 58000/- |
ಸೀನಿಯರ್ ರಿಸರ್ಚ್ ಫೆಲೋ | 42000/- |
ಪ್ರಾಜೆಕ್ಟ್ ಅಸೋಸಿಯೇಟ್ | 31000/- |
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ನಿಗದಿಪಡಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 23.09.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಳಾಸ: Joint Director of Research, Central Coffee Research Institute, Coffee Research Station Post, Chikkamagaluru-577117, Karnataka
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 06-09-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-09-2024
Important Links/ ಪ್ರಮುಖ ಲಿಂಕುಗಳು:
Pingback: ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ 33 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 100000/- BMRCL 33 vacancies Jobs 2024 - EduTech Kannada