ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 200 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: CHESCOM 200 Vacancies Recruitment 2024
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಮೈಸೂರಿನಲ್ಲಿ ಖಾಲಿ ಇರುವ ಒಟ್ಟು 200 ಶಿಶುಕ್ಷು ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 19-01-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
CHESCOM ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕ ಖಾದಿ & ಗ್ರಾಮೋದ್ಯೋಗ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
Graduates Apprentices | 80 |
Diploma Apprentices | 55 |
Non- Engineering Apprentices | 65 |
Total Posts | 200 |
ವೇತನ ಶ್ರೇಣಿ:
ಶಿಶುಕ್ಷು ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ಸ್ಟೈಫಂಡ್ ಅನ್ನು ನೀಡಲಾಗುತ್ತದೆ.
For Graduate Apprentices : Rs. 9000/- pm
For Diploma Apprentices: Rs. 8000/- pm
ವಿದ್ಯಾರ್ಹತೆ ಏನಿರಬೇಕು?
ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿಇ/ ಬಿಟೆಕ್/ಬಿಕಾಂ/ ಬಿಬಿಎ/ ಬಿಸಿಎ/ ಬಿಎ/ ಬಿಎಸ್ಸಿ/ ಸಂಬಂಧಿಸಿದ ವಿಷಯದಲ್ಲಿ ಡಿಪ್ಲೋಮಾ ಮುಗಿಸಿರಬೇಕು.
ವಯೋಮಿತಿ:
ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 25 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ ಹೇಗಿರುತ್ತೆ?
ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು CHESCOM ನ ಅಧಿಕೃತ ವೆಬ್ಸೈಟ್ cescmysore.karnataka.gov.in ವೆಬ್ಸೈಟ್ ನಲ್ಲಿ ದಿನಾಂಕ 19-01-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಕರ್ನಾಟಕ ನಗರ ನೀರು ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ FDA & ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 30-12-2023
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 19-01-2024
ಅಧಿಕೃತ ಲಿಂಕ್/ Official Links:
Pingback: NWKRTC ಯಲ್ಲಿ ಖಾಲಿ ಇರುವ ಸಹಾಯಕ ಲೆಕ್ಕಾಧಿಕಾರಿ & ಇನ್ನಿತರ ಹುದ್ದೆಗಳಿಗೆ ಅರ್ಜಿ ಆಹ್ವಾನ: NWKRTC KEA Recruitment 2024 - EduTech Kannada
Pingback: ಕರ್ನಾಟಕ ಸಾಬೂನು & ಮಾರ್ಜಕ ನಿಯಮಿತದಲ್ಲಿ ಗ್ರೂಪ್ ಎ, ಬಿ, ಸಿ & ಡಿ ಹುದ್ದೆಗಳ ಭರ್ತಿ: KSDL Kea Recruitment 2024 - EduTech Kannada