ಚಿತ್ರದುರ್ಗದ CMCRI ನಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CMCRI Recruitment 2024
ಕರ್ನಾಟಕ ಸರ್ಕಾರದ ಸ್ವಾಯತ್ತ ಸಂಸ್ಥೆಯಾದ ಚಿತ್ರದುರ್ಗಾ ವೈದ್ಯಕೀಯ ಮಹಾವಿದ್ಯಾಲಯ & ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕರು & ಪ್ರಾಧ್ಯಾಪಕರು ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ನಿಗದಿತ ವಿಳಾಸವನ್ನು ತಲುಪಲು 31-01-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
Chitradurga Medical College & Research Institute, Chitradurga (CMCRI) ಇಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಸಹಾಯಕ ಪ್ರಾಧ್ಯಾಪಕ | 26 ಹುದ್ದೆಗಳು |
ಸಹ ಪ್ರಾಧ್ಯಾಪಕರು | 15 ಹುದ್ದೆಗಳು |
ಪ್ರಾಧ್ಯಾಪಕರು | 05 ಹುದ್ದೆಗಳು |
ಒಟ್ಟು ಹುದ್ದೆಗಳು | 46 ಹುದ್ದೆಗಳು |
ವೇತನ ಶ್ರೇಣಿ:
AICTE ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಸಹಾಯಕ ಪ್ರಾಧ್ಯಾಪಕ | 79800-211500 |
ಸಹ ಪ್ರಾಧ್ಯಾಪಕರು | 131400-217100 |
ಪ್ರಾಧ್ಯಾಪಕರು | 14420-218200 |
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮುಗಿಸಿರಬೇಕು PhD/ NET/ KSET ಅರ್ಹತೆ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ :
ರೂ. 4500/- (ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು)
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ, ಡಿಡಿ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 31.01.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಕರ್ನಾಟಕ ವಿತ್ತೀಯ ಕಾರ್ಯನೀತಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 60000/-
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 10-01-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-01-2024
Important Links/ ಪ್ರಮುಖ ಲಿಂಕುಗಳು:
Pingback: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 1752 ನಿರ್ವಾಹಕ & ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್
Pingback: ಕರ್ನಾಟಕ RDPR ಇಲಾಖೆಯಲ್ಲಿ ಖಾಲಿ ಇರುವ 51 ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 60000/- PRC RDPR Jobs 2024 - EduTech Kannada
Pingback: ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಕ್ಲರ್ಕ್, ಅಸಿಸ್ಟೆಂಟ್ ಸೇರಿದಂತೆ ಒಟ್ಟು 140 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜ