ಧಾರವಾಡದ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- Cooperative Bank Dharwad Recruitment 2023

Click to Share

ಧಾರವಾಡದ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- Cooperative Bank Dharwad Recruitment 2023

ರಡ್ಡಿ ಸಹಕಾರ ಬ್ಯಾಂಕ್ ನಿಂದ ವಿವಿಧ ಹುದ್ದೆಗಳ ನೇರ  ನೇಮಕಾತಿಗೆ ಪ್ರಕಟಣೆ ಹೊರಬಿದ್ದಿದೆ. ರಡ್ಡಿ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಜವಾನ  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ  ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್  ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 22 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ವಿಧಾನಸಭೆಯಲ್ಲಿ 7ನೇ ತರಗತಿ ಮುಗಿದವರಿಗೆ ಖಾಯಂ ಉದ್ಯೋಗಾವಕಾಶ- ವೇತನ ರೂ. 42000/- Karnataka Assembly Recruitment  2023

Raddi Cooperative Bank ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕೇಂದ್ರ ಸರ್ಕಾರದ ಉದ್ಯಮ ನ್ಯೂ ಇಂಡಿಯಾದಲ್ಲಿ 450 ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಕಿರಿಯ ಸಹಾಯಕ/ Junior Assistant- 24 ಹುದ್ದೆಗಳು
ಜವಾನ/ Peon- 10 ಹುದ್ದೆಗಳು
ಒಟ್ಟು ಹುದ್ದೆಗಳು- 34

ವೇತನ/ Salary

ಕಿರಿಯ ಸಹಾಯಕ/ Junior Assistant- ರೂ. 17650-32000
ಜವಾನ/ Peon- 12500-24000

ಸಹಕಾರ ಬ್ಯಾಂಕ್ ನಿಯಮಾವಳಿಗಳನ್ವಯ ಮೂಲವೇತನದ ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಕಿರಿಯ ಸಹಾಯಕ/ Junior Assistant:

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು & ಹೈಯರ್ ಡಿಪ್ಲೋಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಅಥವಾ ತತ್ಸಮಾನ ಕೋರ್ಸ್ ಮುಗಿಸಿರಬೇಕು.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಎರಡು ವರ್ಷಗಳ ಅನುಭವ ಹೊಂದಿರುವವರಿಗೆ ಆಧ್ಯತೆ ನೀಡಲಾಗುತ್ತದೆ.

ಸೇವಕ/ ಜವಾನ:

ಮಾನ್ಯತೆ ಪಡೆದ ಸಂಸ್ಥೆಯಿಂದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಕಿರಿಯ ಸಹಾಯಕ ಹುದ್ದೆಗಳು: ರೂ. 1000/-

ಸೇವಕ ಹುದ್ದೆಗಳು: ರೂ. 500/-

ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ನೆಟ್  ಬ್ಯಾಂಕಿಂಗ್, ಕ್ರೇಡಿಟ್/ ಡೆಬಿಟ್ ಕಾರ್ಡ್ ಮುಖಾಂತರ ಪಾವತಿ ಮಾಡಬಹುದು.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನ ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 26.07.2023 ರಿಂದ 22.08.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಬ್ಯಾಂಕ್ ನ  ವೆಬ್ ಸೈಟ್ www.raddibank.com ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 26-07-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:22-08-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 22-08-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click to Share
Bookmark the permalink.

About edutechkannada.com

www.edutechkannada.com Educator

Leave a Reply

Your email address will not be published. Required fields are marked *