ಹತ್ತಿ ನಿಗಮ ನಿಯಮಿತದಲ್ಲಿ ಖಾಳಿ ಇರುವ ಕಿರಿಯ ಸಹಾಯಕ ಸೇರಿ ಒಟ್ಟು 193 ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: CotCorp Vacancies 2024

Click to Share

ಹತ್ತಿ ನಿಗಮ ನಿಯಮಿತದಲ್ಲಿ ಖಾಳಿ ಇರುವ ಕಿರಿಯ ಸಹಾಯಕ ಸೇರಿ ಒಟ್ಟು 193 ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: CotCorp Vacancies 2024

ಕೇಂದ್ರ ಜವಳಿ ಇಲಾಖೆಯ ಅಡಿಯಲ್ಲಿ ಬರುವ ಭಾರತೀಯ ಹತ್ತಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗೆ   ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 02-07-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಬೇಟಿ ನೀಡಿ ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ 9995 ಗ್ರೂಪ್ ಎ & ಬಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

The Cotton Corporation of India Ltd. ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 435 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನ- ವೇತನ ರೂ. 25000/- 

ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಅಸಿಸ್ಟೆಂಟ್ ಮ್ಯಾನೇಜರ್ (ಲೀಗಲ್) 01
ಅಸಿಸ್ಟೆಂಟ್ ಮ್ಯಾನೇಜರ್ (ಆಫೀಸಿಯಲ್ ಲಾಂಗ್ವೇಜ್) 01
ಮ್ಯಾನೇಜ್ಮೆಂಟ್ ಟ್ರೈನಿ (ಮಾರ್ಕೆಟಿಂಗ್) 10
ಮ್ಯಾನೇಜ್ಮೆಂಟ್ ಟ್ರೈನಿ (ಅಕೌಂಟ್ಸ್) 19
ಜೂನಿಯರ್ ಕಮರ್ಶಿಯಲ್ ಎಕ್ಸಿಕ್ಯೂಟೀವ್ಸ್ 112
ಜೂನಿಯರ್ ಅಸಿಸ್ಟೆಂಟ್ (ಜನರಲ್) 14
ಜೂನಿಯರ್ ಅಸಿಸ್ಟೆಂಟ್ (ಅಕೌಂಟ್ಸ್) 35
ಜೂನಿಯರ್ ಅಸಿಸ್ಟೆಂಟ್ (ಹಿಂದಿ ಟ್ರಾನ್ಸಲೇಟರ್) 01
ಒಟ್ಟು ಹುದ್ದೆಗಳು 193

ವೇತನ ಶ್ರೇಣಿ:

ಹುದ್ದೆಯ ಹೆಸರು ವೇತನ
ಅಸಿಸ್ಟೆಂಟ್ ಮ್ಯಾನೇಜರ್ (ಲೀಗಲ್) 40000-140000
ಅಸಿಸ್ಟೆಂಟ್ ಮ್ಯಾನೇಜರ್ (ಆಫೀಸಿಯಲ್ ಲಾಂಗ್ವೇಜ್) 40000-140000
ಮ್ಯಾನೇಜ್ಮೆಂಟ್ ಟ್ರೈನಿ (ಮಾರ್ಕೆಟಿಂಗ್) 30000-120000
ಮ್ಯಾನೇಜ್ಮೆಂಟ್ ಟ್ರೈನಿ (ಅಕೌಂಟ್ಸ್) 30000-120000
ಜೂನಿಯರ್ ಕಮರ್ಶಿಯಲ್ ಎಕ್ಸಿಕ್ಯೂಟೀವ್ಸ್ 22000-90000
ಜೂನಿಯರ್ ಅಸಿಸ್ಟೆಂಟ್ (ಜನರಲ್) 22000
ಜೂನಿಯರ್ ಅಸಿಸ್ಟೆಂಟ್ (ಅಕೌಂಟ್ಸ್) 22000
ಜೂನಿಯರ್ ಅಸಿಸ್ಟೆಂಟ್ (ಹಿಂದಿ ಟ್ರಾನ್ಸಲೇಟರ್) 22000

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಹುದ್ದೆಯ ಹೆಸರು ವಿದ್ಯಾರ್ಹತೆ
ಅಸಿಸ್ಟೆಂಟ್ ಮ್ಯಾನೇಜರ್ (ಲೀಗಲ್) ಕಾನೂನು ವಿಷಯದಲ್ಲಿ ಪದವಿ
ಅಸಿಸ್ಟೆಂಟ್ ಮ್ಯಾನೇಜರ್ (ಆಫೀಸಿಯಲ್ ಲಾಂಗ್ವೇಜ್) ಸ್ನಾತಕೋತ್ತರ ಪದವಿ (ಹಿಂದಿ)
ಮ್ಯಾನೇಜ್ಮೆಂಟ್ ಟ್ರೈನಿ (ಮಾರ್ಕೆಟಿಂಗ್) MBA
ಮ್ಯಾನೇಜ್ಮೆಂಟ್ ಟ್ರೈನಿ (ಅಕೌಂಟ್ಸ್) CA/ CMA
ಜೂನಿಯರ್ ಕಮರ್ಶಿಯಲ್ ಎಕ್ಸಿಕ್ಯೂಟೀವ್ಸ್ B.Sc in Agri
ಜೂನಿಯರ್ ಅಸಿಸ್ಟೆಂಟ್ (ಜನರಲ್) B.Sc in Agri
ಜೂನಿಯರ್ ಅಸಿಸ್ಟೆಂಟ್ (ಅಕೌಂಟ್ಸ್) B.Com
ಜೂನಿಯರ್ ಅಸಿಸ್ಟೆಂಟ್ (ಹಿಂದಿ ಟ್ರಾನ್ಸಲೇಟರ್) ಪದವಿ (ಹಿಂದಿ)

ಅರ್ಜಿ ಶುಲ್ಕ  :

ಪ.ಜಾ/ ಪಪಂ/ Ex-SM/ PwBD ಅಭ್ಯರ್ಥಿಗಳಿಗೆ: ರೂ. 500/-

ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : 1500/-

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 30 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತರು ಅರ್ಜಿಗಳನ್ನು ದಿನಾಂಕ 12.06.2024 ರಿಂದ 02.07.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.cotcorp.org.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಕರ್ನಾಟಕ ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಕೌಂಟೆಂಟ್ & ಸಾಕ್ಷರರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 12-06-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-07-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:


Click to Share
Bookmark the permalink.

About edutechkannada.com

www.edutechkannada.com Educator

One Response to ಹತ್ತಿ ನಿಗಮ ನಿಯಮಿತದಲ್ಲಿ ಖಾಳಿ ಇರುವ ಕಿರಿಯ ಸಹಾಯಕ ಸೇರಿ ಒಟ್ಟು 193 ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: CotCorp Vacancies 2024

  1. Pingback: ಬೆಂಗಳೂರಿನ ಮರ್ಚಂಟ್ ಕೋಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಲೆಕ್ಕಿಗ ಹುದ್ದೆಗಳ ನೇಮಕಾತಿಗ

Leave a Reply

Your email address will not be published. Required fields are marked *