ಜಿಲ್ಲಾ ಬಾಲ ಕಾರ್ಮಿಕ ಸಂಘದಲ್ಲಿ ಖಾಲಿ ಇರುವ ಲೆಕ್ಕಿಗ ಕಮ್ ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: DCLP Karnataka Jobs 2024

Click to Share

ಜಿಲ್ಲಾ ಬಾಲ ಕಾರ್ಮಿಕ ಸಂಘದಲ್ಲಿ ಖಾಲಿ ಇರುವ ಲೆಕ್ಕಿಗ ಕಮ್ ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: DCLP Karnataka Jobs 2024

ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ,  ಧಾರವಾಡ ವತಿಯಿಂದ ರಾಜ್ಯ ಬಾಲ ಕಾರ್ಮಿಕ ನಿರ್ಮೂಲನೆ ಕ್ರಿಯಾಯೋಜನೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಲೆಕ್ಕಿಗ ಕಮ್ ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 28-02-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಖುದ್ದಾಗಿ ಅಥವಾ Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 1025 ಬೃಹತ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ವಿಮಾನ ಇಲಾಖೆಯಲ್ಲಿ ಖಾಲಿ ಇರುವ 490 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಲೆಕ್ಕಿಗ ಕಮ್ ಸಹಾಯಕ 01
ಒಟ್ಟು ಹುದ್ದೆಗಳು 01

ವೇತನ ಶ್ರೇಣಿ:

ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ, ಧಾರವಾಡ ವತಿಯಿಂದ ಮಾಸಿಕ ರೂ. 20000/- ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ವಾಣಿಜ್ಯಶಾಸ್ತ್ರ ವಿಷಯದಲ್ಲಿ ಪದವಿ (ಬಿಕಾಂ) ಮುಗಿಸಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ 5 ವರ್ಷಗಳ ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ

ಅರ್ಜಿ ಶುಲ್ಕ  :

ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 28.02.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕದ ಈ ಜಿಲ್ಲೆಯಲ್ಲಿ ಖಾಲಿ ಇರುವ ಒಟ್ಟು 202 ಗೃಹರಕ್ಷಕ ಹುದ್ದೆಗಳಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 14-02-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-02-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:


Click to Share
Bookmark the permalink.

About edutechkannada.com

www.edutechkannada.com Educator

2 Responses to ಜಿಲ್ಲಾ ಬಾಲ ಕಾರ್ಮಿಕ ಸಂಘದಲ್ಲಿ ಖಾಲಿ ಇರುವ ಲೆಕ್ಕಿಗ ಕಮ್ ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: DCLP Karnataka Jobs 2024

  1. Pingback: KPSC ಯಿಂದ 384 ಗ್ರೂಪ್ ಎ & ಬಿ ಗೆಜೆಟೆಡ್ ಪ್ರೊಬೇಶನರಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: KPSC KAS Recruitment 2024 - EduTech

  2. Pingback: RDPR ನಲ್ಲಿ ಖಾಲಿ ಇರುವ SDA & FDA ಒಟ್ಟು 300 ಹುದ್ದೆಗಳಿಗೆ ಅಧಿಸೂಚನೆ ಪ್ರಕಟ: RDPR SDA & FDA Jobs 2024 - EduTech Kannada

Leave a Reply

Your email address will not be published. Required fields are marked *