ನಾಗರಿಕ ವಿಮಾನಯಾನ ಇಲಾಖೆಯಲ್ಲಿ ಖಾಲಿ ಇರುವ ಗುಮಾಸ್ತ & ಹಿರಿಯ ನಿರೀಕ್ಷಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Dept. of Civil Aviation Recruitment 2023
ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ನಾಗರಿಕ ವಿಮಾನಯಾನದಲ್ಲಿ ಖಾಲಿ ಇರುವ ಹುದ್ದೆಗಳ ಅಪ್ಪರ್ ಡಿವಿಸನ್ ಕ್ಲರ್ಕ್ & ಸೀನಿಯರ್ ಇನ್ಸಪೆಕ್ಟರ್ ಹುದ್ದೆಗಳನ್ನು ನಿಯೋಜನೆ ಮೂಲಕ ಭರ್ತಿ ಮಾಡಲು ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಆಸಕ್ತರು ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 07-12-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
Department of Civil Aviation ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
Upper Division Clerk | 01 |
Senior Inspector | 04 |
Total Posts | 05 |
ವೇತನ ಶ್ರೇಣಿ:
ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಕೆಳಗಿನಂತೆ ವೇತನ ನೀಡಲಾಗತ್ತದೆ.
ಹುದ್ದೆಯ ಹೆಸರು | ವೇತನ ಶ್ರೇಣಿ |
Upper Division Clerk | ರೂ. 25500-81100 |
Senior Inspector | ರೂ. 44900-142400 |
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ನಿಗದಿಪಡಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 07.12.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-10-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-12-2023
Important Links/ ಪ್ರಮುಖ ಲಿಂಕುಗಳು:
Pingback: ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸಿಸ್ಟೆಂಟ್ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲ
Pingback: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: BDA Recr