ಜಿಲ್ಲಾ ಆಯುಷ್ ಕಾರ್ಯಾಲಯದಲ್ಲಿ ಖಾಲಿ ಇರುವ ಮಲ್ಟಿ ಪರ್ಪಸ್ ವರ್ಕರ್ & ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: District Ayush Office Hassan Recruitment 2024
ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ, ಹಾಸನ ಜಿಲ್ಲೆಯ ವತಿಯಿಂದ ಖಾಲಿ ಇರುವ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ವೈದ್ಯಕೀಯ ಹಾಗೂ ಅರೆ ವೈದ್ಯಕೀಯ (Medical & Paramedical) ಹುದ್ದೆಗಳ ಗುತ್ತಿಗೆ ಆಧಾರದ ಮೇಲೆ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 28-09-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ, ಹಾಸನದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ 26 ಹುದ್ದೆಗಳ ಭರ್ತಿಗೆ ಹತ್ತನೆ ಹಾಗೂ ಪಿಯುಸಿ ಆದವರಿಂದ ಅರ್ಜಿ ಆಹ್ವಾನ
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ತಜ್ಞ ವೈದ್ಯರು (ಆಯುರ್ವೇದ & ಯೋಗ) | 02 |
ಔಷಧಿ ವಿತರಕರು | 06 |
ಮಸಾಜಿಸ್ಟ್ | 02 |
ಮಲ್ಟಿ ಪರ್ಪಸ್ ವರ್ಕರ್ | 01 |
ಸಮುದಾಯ ಆರೋಗ್ಯ ಅಧಿಕಾರಿ | 03 |
ಒಟ್ಟು ಹುದ್ದೆಗಳು | 14 ಹುದ್ದೆಗಳು |
ವೇತನ ಶ್ರೇಣಿ:
ಹುದ್ದೆಯ ಹೆಸರು | ವೇತನ |
ತಜ್ಞ ವೈದ್ಯರು | 57550/- |
ಔಷಧಿ ವಿತರಕರು | 27550/- |
ಮಸಾಜಿಸ್ಟ್ | 18500/- |
ಮಲ್ಟಿ ಪರ್ಪಸ್ ವರ್ಕರ್ | 16900/- |
ಸಮುದಾಯ ಆರೋಗ್ಯ ಅಧಿಕಾರಿ | 40000/- |
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಕೆಳಗೆ ನೀಡಲಾದ ವಿದ್ಯಾರ್ಹತೆ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಹುದ್ದೆಯ ಹೆಸರು | ವಿದ್ಯಾರ್ಹತೆ |
ತಜ್ಞ ವೈದ್ಯರು | ಸಂಬಂಧಿಸಿದ ವಿಷಯದಲ್ಲಿ BAMS ಅಥವಾ ತತ್ಸಮಾನ |
ಔಷಧಿ ವಿತರಕರು | 10th & D-Pharmacy |
ಮಸಾಜಿಸ್ಟ್ | 7th Class |
ಮಲ್ಟಿ ಪರ್ಪಸ್ ವರ್ಕರ್ | 10th Class |
ಸಮುದಾಯ ಆರೋಗ್ಯ ಅಧಿಕಾರಿ | BAMS/ BUMS |
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 28.09.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 31000/-
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 28-08-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-09-2024
Important Links/ ಪ್ರಮುಖ ಲಿಂಕುಗಳು:
Pingback: ಧಾರವಾಡದ ತಾಂತ್ರಿಕ ಸಂಸ್ಥೆಯಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ವ್ಯವಸ್ಥಾಪಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ-