ಜಿಲ್ಲಾ ಕಾನೂನು ಪ್ರಾಧಿಕಾರದಲ್ಲಿ ಖಾಲಿ ಇರುವ ಕ್ಲರ್ಕ್, ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: DLSA Bgt Recruitment 2024
ಬಾಗಲಕೋಟೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಕ್ಲರ್ಕ್, ಆಫೀಸ್ ಅಸಿಸ್ಟೆಂಟ್ & ಪಿವನ್ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 03-10-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಆಯುರ್ವೇದ ಮಹಾವಿದ್ಯಾಲಯದಲ್ಲಿ ಖಾಲಿ ಇರುವ SDA, ಸ್ಟಾಫ್ ನರ್ಸ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ (DLSA) ದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ 108 ಆಫೀಸ್ ಅಸಿಸ್ಟೆಂಟ್ ನೇಮಕಾತಿಗೆ ಅಧಿಸೂಚನೆ-
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಆಫೀಸ್ ಅಸಿಸ್ಟೆಂಟ್/ ಕ್ಲರ್ಕ್ | 02 ಹುದ್ದೆ |
ಆಫೀಸ್ ಪಿವನ್ | 02 ಹುದ್ದೆ |
ಒಟ್ಟು ಹುದ್ದೆಗಳು | 04 ಹುದ್ದೆಗಳು |
ವೇತನ ಶ್ರೇಣಿ:
ಹುದ್ದೆಯ ಹೆಸರು | ವೇತನ |
ಆಫೀಸ್ ಅಸಿಸ್ಟೆಂಟ್/ ಕ್ಲರ್ಕ್ | 19695/- |
ಆಫೀಸ್ ಪಿವನ್ | 15884/- |
ಶೈಕ್ಷಣಿಕ ಅರ್ಹತೆಗಳು:
ಆಫೀಸ್ ಅಸಿಸ್ಟೆಂಟ್/ ಕ್ಲರ್ಕ್ :
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ವಿದ್ಯಾರ್ಹತೆಯನ್ನು ಮುಗಿಸಿರಬೇಕು & ಕಂಪ್ಯೂಟರ್ ಜ್ಞಾನ ಹೊಂದಿರಬೇಕು
ಆಫೀಸ್ ಪಿವನ್:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್ ನಿಂದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು
ಅರ್ಜಿ ಶುಲ್ಕ :
ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 03.10.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25-09-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-10-2024
Important Links/ ಪ್ರಮುಖ ಲಿಂಕುಗಳು: