ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ GTTC ಯಿಂದ ಆನ್ಲೈನ್ ಅರ್ಜಿ ಆಹ್ವಾನ: GTTC Recruitment 2024

Click to Share

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ GTTC ಯಿಂದ ಆನ್ಲೈನ್ ಅರ್ಜಿ ಆಹ್ವಾನ: GTTC Recruitment 2024

ಸರ್ಕಾರಿ ಉಪಕರಣಗಾರ & ತರಬೇತಿ ಕೇಂದ್ರ, ಬೆಂಗಳೂರು ವತಿಯಿಂದ  ಖಾಲಿ ಇರುವ ಒಟ್ಟು 61  ಉಪನ್ಯಾಸಕ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 16-01-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಸರ್ಕಾರಿ ಉಪಕರಣಗಾರ & ತರಬೇತಿ ಕೇಂದ್ರ, ಬೆಂಗಳೂರು (GTTC), ಇಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ  ಅಕೌಂಟ್ಸ್ & ಫೈನಾನ್ಸ್ ಆಫೀಸರ್ ಹುದ್ದೆಗಳ ನೇಮಕಾತಿ ಪ್ರಕಟಣೆ: ವೇತನ ರೂ. 47600/-

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಸರ್ಕಾರಿ ಉಪಕರಣಗಾರ & ತರಬೇತಿ ಕೇಂದ್ರ

ಹುದ್ದೆಯ ಹೆಸರು: ಉಪನ್ಯಾಸಕರು

ಕರ್ತವ್ಯ ಸ್ಥಳ: ಕರ್ನಾಟಕದ ವಿವಿಧ ಜಿಲ್ಲೆಗಳು

ಖಾಲಿ ಇರುವ ಹುದ್ದೆಗಳ ಸಂಖ್ಯೆ: 61 ಹುದ್ದೆಗಳು

ವೇತನ/ Salary Scale:

ಪ್ರತಿ ತಿಂಗಳು ರೂ. 19000-35000 ವರೆಗೆ ಕ್ರೂಢಿಕೃತ ವೇತನ ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಸಂಬಂಧಿಸಿದ ವಿಷಯದಲ್ಲಿ ಬಿಇ ಅಥವಾ ಬಿಟೆಕ್ ವಿದ್ಯಾರ್ಹತೆಯನ್ನು ಹೊಂದಿರಬೇಕು ಮತ್ತು ನಿರ್ದಿಷ್ಟ ಪಡಿಸಿದ ವರ್ಷಗಳ ಅನುಭವ ಹೊಂದಿರಬೇಕು.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು

ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ  ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 03.01.2024 ರಿಂದ 16.01.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು GTTC Karnataka  ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

ಕೃಷಿ ವಿಶ್ವವಿದ್ಯಾಲಯ ರಾಯಚೂರಿನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 03-01-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 16-01-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click to Share
Bookmark the permalink.

About edutechkannada.com

www.edutechkannada.com Educator

3 Responses to ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ GTTC ಯಿಂದ ಆನ್ಲೈನ್ ಅರ್ಜಿ ಆಹ್ವಾನ: GTTC Recruitment 2024

  1. Pingback: ಬೆಂಗಳೂರಿನ ರೇಷ್ಮೇ ನಿಗಮದಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ: CSB recruitment 2024 - EduTech Kannada

  2. Pingback: ಕರ್ನಾಟಕ ನಗರ ನೀರು ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ FDA & ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ: KEA KUWSDB Jobs 2024 - EduTech Kannada

  3. Sunilkumar says:

    Workers

Leave a Reply

Your email address will not be published. Required fields are marked *