HAL ಬೆಂಗಳೂರಿನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮತ್ತು ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 46000/- HAL Asst and Operator Jobs 2024
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್, ಬೆಂಗಳೂರಿನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮತ್ತು ಆಪರೇಟರ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 28-06-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
HAL ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಗ್ರಾಮೀಣ ಬ್ಯಾಂಕುಗಳಲ್ಲಿ 10000 ಗ್ರೂಪ್ ಎ & ಬಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಅಸಿಸ್ಟೆಂಟ್ (ವಿವಿಧ ವಿಭಾಗಗಳು) | 13 ಹುದ್ದೆಗಳು |
ಆಪರೇಟರ್ (ವಿವಿಧ ವಿಭಾಗಗಳು) | 59 ಹುದ್ದೆಗಳು |
ಒಟ್ಟು ಹುದ್ದೆಗಳು | 72 ಹುದ್ದೆಗಳು |
ವೇತನ ಶ್ರೇಣಿ:
HAL ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ಕೆಳಗೆ ನೀಡಲಾಗಿರುವ ಮೂಲ ವೇತನ ನಿಗದಿಪಡಿಸಲಾಗಿದೆ.
ಹುದ್ದೆಯ ಹೆಸರು | ವೇತನ |
ಅಸಿಸ್ಟೆಂಟ್ | ರೂ. 46500/- |
ಆಪರೇಟರ್ | ರೂ. 44500/- |
ವಿದ್ಯಾರ್ಹತೆ ಏನಿರಬೇಕು?
ಅಸಿಸ್ಟೆಂಟ್: ಅಭ್ಯರ್ಥಿಗಳು ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಮೂರು ವರ್ಷಗಳ ಡಿಪ್ಲೋಮಾ ಮುಗಿಸಿರಬೇಕು.
ಆಪರೇಟರ್ : ಅಭ್ಯರ್ಥಿಗಳು ಹತ್ತನೇ ತರಗತಿ ಉತ್ತೀರ್ಣ & ನಿಗದಿಪಡಿಸಿದ ಟ್ರೇಡ್ ನಲ್ಲಿ ಐಟಿಐ ಮುಗಿಸಿರಬೇಕು.
ವಯೋಮಿತಿ: (01-06-2024 ಕ್ಕೆ ಸರಿಯಾಗಿ)
ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 28 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 03 ವರ್ಷ
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು HAL ನ ಅಧಿಕೃತ ವೆಬ್ಸೈಟ್ www.hal-india.co.in ವೆಬ್ಸೈಟ್ ನಲ್ಲಿ ದಿನಾಂಕ 28-06-2024 ರ ಒಳಗಾಗಿ ಆನ್ಲೈನ್ ಮೂಲಕ ಮೂಲಕ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 21-06-2024
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 28-06-2024
ಅಧಿಕೃತ ಲಿಂಕ್/ Official Links:
Official Website/ ಅಧಿಕೃತ ಜಾಲತಾಣ
Pingback: ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಎಇ ಮತ್ತು ಜೆಇ ಸೇರಿ ವಿವಿಧ ಹುದ್ದೆಗಳ ಭರ್ತಿಗೆ KPSC ಗೆ ಪ್ರಸ್ತಾವನೆ ಸಲ್ಲಿ
Pingback: ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಕಛೇರಿಯಲ್ಲಿ ಖಾಲಿ ಇರುವ 30 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: HFW Koppal Recruitment 2024 - EduTech K
Pingback: ಕರ್ನಾಟಕ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 825 ಹಾಸ್ಟೆಲ್ ವಾರ್ಡನ್ & ಇತರೆ ಹುದ್ದೆಗಳ ನೇಮಕಾತ