HAL ಬೆಂಗಳೂರಿನಲ್ಲಿ ಐಟಿಐ ಅಥವಾ ಡಿಪ್ಲೋಮಾ ಮುಗಿದವರಿಗೆ 182 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 46000/- HAL Non Executive Jobs 2024
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್, ಬೆಂಗಳೂರಿನಲ್ಲಿ ಖಾಲಿ ಇರುವ ನಾನ್ ಎಕ್ಸಿಕ್ಯೂಟಿವ್ ಕೇಡರ್ ನ ಟೆಕ್ನಿಷಿಯನ್, ಆಪರೇಟರ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 12-06-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕೆಪಿಎಸ್ಸಿ ಯಿಂದ ಪದವಿ ಅಥವಾ ಡಿಪ್ಲೋಮಾ ಮುಗಿದವರಿಗೆ 426 ಹುದ್ದೆಗಳಿಗೆ ಅರ್ಜಿ ಆಹ್ವಾನ
HAL ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 312 ಹುದ್ದೆಗಳ ನೇರ ನೇಮಕಾತಿಗೆ UPSC ಯಿಂದ ಅರ್ಜಿ ಆಹ್ವಾನ
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಡಿಪ್ಲೋಮಾ ಟೆಕ್ನಿಷಿಯನ್ | 46 ಹುದ್ದೆಗಳು |
ಆಪರೇಟರ್ | 136 ಹುದ್ದೆಗಳು |
ಒಟ್ಟು ಹುದ್ದೆಗಳು | 182 ಹುದ್ದೆಗಳು |
ವೇತನ ಶ್ರೇಣಿ:
HAL ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ಕೆಳಗೆ ನೀಡಲಾಗಿರುವ ಮೂಲ ವೇತನ ನಿಗದಿಪಡಿಸಲಾಗಿದೆ.
ಹುದ್ದೆಯ ಹೆಸರು | ವೇತನ |
ಡಿಪ್ಲೋಮಾ ಟೆಕ್ನಿಷಿಯನ್ | ರೂ. 46500/- |
ಆಪರೇಟರ್ | ರೂ. 44500/- |
ವಿದ್ಯಾರ್ಹತೆ ಏನಿರಬೇಕು?
ಟೆಕ್ನಿಷಿಯನ್: ಅಭ್ಯರ್ಥಿಗಳು ಸಂಬಂಧಿಸಿದ ಟ್ರೇಡ್ ನಲ್ಲಿ ಮೂರು ವರ್ಷಗಳ ಡಿಪ್ಲೋಮಾ ಮುಗಿಸಿರಬೇಕು.
ಆಪರೇಟರ್ : ಅಭ್ಯರ್ಥಿಗಳು ಹತ್ತನೇ ತರಗತಿ ಉತ್ತೀರ್ಣ & ನಿಗದಿಪಡಿಸಿದ ಟ್ರೇಡ್ ನಲ್ಲಿ ಐಟಿಐ ಮುಗಿಸಿರಬೇಕು.
ವಯೋಮಿತಿ: (01-05-2024 ಕ್ಕೆ ಸರಿಯಾಗಿ)
ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 28 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 03 ವರ್ಷ
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು HAL ನ ಅಧಿಕೃತ ವೆಬ್ಸೈಟ್ www.hal-india.co.in ವೆಬ್ಸೈಟ್ ನಲ್ಲಿ ದಿನಾಂಕ 12-06-2024 ರ ಒಳಗಾಗಿ ಆನ್ಲೈನ್ ಮೂಲಕ ಮೂಲಕ ಸಲ್ಲಿಸಬಹುದು.
ಕರ್ನಾಟಕ ವಿಧಾನಮಂಡಲದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ & ಡಾಟಾ ಎಂಟ್ರ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 30-05-2024
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 12-06-2024
ಅಧಿಕೃತ ಲಿಂಕ್/ Official Links:
Pingback: ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 56000/- CFTRI Mysore Jobs 2024 - EduT