ಕರ್ನಾಟಕ ಆರೋಗ್ಯ ಇಲಾಖೆಯಿಂದ ಖಾಲಿ ಇರುವ 1505 ವಿವಿಧ ಹುದ್ದೆಗಳ ನೇಮಕಾತಿ: health Department of Karnataka Recruitment soon
ಕರ್ನಾಟಕ ಆರೋಗ್ಯ ಇಲಾಖೆಯ ವತಿಯಿಂದ ಶೀಘ್ರದಲ್ಲಿಯೇ ಬೃಹತ್ ನೇಮಕಾತಿ ಆರಂಭವಾಗಲಿದೆ. ಇದರಲ್ಲಿ ಖಾಲಿ ಇರುವ 1205 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಮತ್ತು 300 ಆರೋಗ್ಯ ನಿರೀಕ್ಷಣಾಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸದರಿ ಪ್ರಸ್ತಾವನೆಗೆ ಸರ್ಕಾರವು ಅನುಮತಿ ನೀಡಿದ್ದು, ಶೀಘ್ರದಲ್ಲಿಯೇ 1505 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಲಿದೆ. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಅಧಿಸೂಚನೆ ಪ್ರಕಟ
ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಾಯಚೂರಿನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 110000/-
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಪ್ರಾಥಮಿಕ ಆರೋಗ್ಯ ನಿರೀಕ್ಷಣಾಧಿಕಾರಿ | 1205 |
ಆರೋಗ್ಯ ನಿರೀಕ್ಷಣಾಧಿಕಾರಿ | 300 |
ಒಟ್ಟು ಹುದ್ದೆಗಳು | 1205 |
ವೇತನ ಶ್ರೇಣಿ:
ರಾಜ್ಯ ಸರ್ಕಾರದ ನಿಯಮಾವಳಿಗಳ ಅನ್ವಯ ವೇತನ ನೀಡಲಾಗುತ್ತದೆ.
ವಿದ್ಯಾರ್ಹತೆ ಏನಿರಬೇಕು?
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಅಧಿಸೂಚನೆಯಲ್ಲಿ ತಿಳಿಸಲಾಗುವ ವಿದ್ಯಾರ್ಹತೆ ಮುಗಿಸಿರಬೇಕು.
ವಯೋಮಿತಿ:
ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 27 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯ ನಂತರ ನಿಗದಿತ ವೆಬ್ಸೈಟ್ ನಲ್ಲಿ ನಿಗದಿಪಡಿಸಿದ ದಿನಾಂಕಗಳಂದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಜಿಲ್ಲಾ ಪಂಚಾಯತ್ ನಲ್ಲಿ ಆಡಳಿತ ಸಹಾಯಕ ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: SOON
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: SOON
ಅಧಿಕೃತ ಲಿಂಕ್/ Official Links: