ನೈಋತ್ಯ ರೈಲ್ವೇ ಹುಬ್ಬಳ್ಳಿಯಲ್ಲಿ ಖಾಲಿ ಇರುವ 713 ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- Hubli RRC  GDCE Jobs 2023

Click to Share

ನೈಋತ್ಯ ರೈಲ್ವೇ ಹುಬ್ಬಳ್ಳಿಯಲ್ಲಿ ಖಾಲಿ ಇರುವ 713 ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- Hubli RRC  GDCE Jobs 2023

ಭಾರತೀಯ ರೈಲ್ವೇಯ ಒಂದು ವಲಯವಾದ ನೈಋತ್ಯ ರೈಲ್ವೆ ಹುಬ್ಬಳ್ಳಿಯಲ್ಲಿ  ಖಾಲಿ ಇರುವ ಹುದ್ದೆಗಳ ಇಲಾಖಾ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಹಬ್ಬಳ್ಳಿ ರೈಲ್ವೇಯಲ್ಲಿ ಖಾಲಿ ಇರುವ ಸಹಾಯಕ, ಟೆಕ್ನಿಶಿಯನ್ & ಜೂನಿಯರ್ ಇಂಜಿನಿಯರ್ ಒಟ್ಟು 713 ಹುದ್ದೆಗಳ ಭರ್ತಿಗೆ ಇಲಾಖಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟಂಬರ್ 02 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಧಾರವಾಡದ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ನೈಋತ್ಯ ರೈಲ್ವೆ ಹುಬ್ಬಳ್ಳಿಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ವಿಧಾನಸಭೆಯಲ್ಲಿ 7ನೇ ತರಗತಿ ಮುಗಿದವರಿಗೆ ಖಾಯಂ ಉದ್ಯೋಗಾವಕಾಶ- ವೇತನ ರೂ. 42000/- 

ಹುದ್ದೆಗಳ ವಿವರ/ Post Details:

ಅಸಿಸ್ಟೆಂಟ್ ಲೋಕೊ ಪೈಲೆಟ್- 588 ಹುದ್ದೆಗಳು
ಜೂನಿಯರ್ ಇಂಜಿನಿಯರ್- 104 ಹುದ್ದೆಗಳು
ಟೆಕ್ನಿಶಿಯನ್ ಗ್ರೇಡ್ 2 – 21 ಹುದ್ದೆಗಳು
ಒಟ್ಟು ಹುದ್ದೆಗಳು-  713 ಹುದ್ದೆಗಳು

ವೇತನ ಶ್ರೇಣಿ/ Salary Scale:

ರೈಲ್ವೇ ಇಲಾಖೆಯ ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ನಿಗದಿಪಡಿಸಿದ ವೇತನವನ್ನು  ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಲೋಕೋಪೈಲೆಟ್/ ಟೆಕ್ನಿಶಿಯನ್

ಯಾವುದೇ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ ಮತ್ತು ಸಂಬಂಧಿಸಿದ ವಿಷಯದಲ್ಲಿ ಐಟಿಐ ಮುಗಿಸಿರಬೇಕು.

ಜೂನಿಯರ್ ಇಂಜಿನಿಯರ್:

 ಯಾವುದೇ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಮುಗಿಸಿರಬೇಕು.

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

 ಕೇಂದ್ರ ಸರ್ಕಾರದ ಉದ್ಯಮ ನ್ಯೂ ಇಂಡಿಯಾದಲ್ಲಿ 450 ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 42 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 03.08.2023 ರಿಂದ 02.09.2023 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ https://rrchubli.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 03-08-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-09-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply now

ವೆಬ್ಸೈಟ್/ Website :


Click to Share

Leave a Comment

Your email address will not be published. Required fields are marked *

Scroll to Top