ಭಾರತೀಯ ವಾಯುಸೇನೆಯಲ್ಲಿ 6000 ಕ್ಕೂ ಹೆಚ್ಚು ಅಗ್ನಿವೀರ ಭರ್ತಿಗೆ ಅರ್ಜಿ ಆಹ್ವಾನ: IAF Agniveervayu Recruitment 2023

Click to Share

ಭಾರತೀಯ ವಾಯುಸೇನೆಯಲ್ಲಿ 6000 ಕ್ಕೂ ಹೆಚ್ಚು ಅಗ್ನಿವೀರ ಭರ್ತಿಗೆ ಅರ್ಜಿ ಆಹ್ವಾನ: IAF Agniveervayu Recruitment 2023

ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಅಗ್ನಿಪಥ ಯೋಜನೆಯ ಅಂಗವಾಗಿ ಅಗ್ನಿವೀರ ಗಳ ಬೃಹತ್ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಭಾರತೀಯ ವಾಯುಸೇನೆಯಲ್ಲಿ ಖಾಲಿ ಇರುವ ಸರಿಸುಮಾರು 6000 ಅಗ್ನಿವೀರವಾಯು  ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. IAF ನಲ್ಲಿ  ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್  17, 2023 ಕೊನೆಯ ದಿನಾಂಕವಾಗಿದೆ.  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

10 ನೇ ಮುಗಿದವರಿಗೆ 458 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ITBP Constable Recruitment 2023

Indian Airforce ನಲ್ಲಿ ಖಾಲಿ ಇರುವ ಅಗ್ನಿವೀರವಾಯು ಹುದ್ದೆಗಳ ನೇಮಕಾತಿ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

 ಪ್ರೌಢಶಾಲೆಗಳಲ್ಲಿ ಖಾಲಿ ಇರುವ 5120 ಬೋಧಕ ಹುದ್ದೆಗಳ ಭರ್ತಿಗೆ ಅನುಮತಿ| ಅನುದಾನಿತ ಶಾಲೆಗಳಲ್ಲಿ ನೇಮಕಾತಿ ಆರಂಭ

ಹುದ್ದೆಗಳ ವಿವರ/ Post Details:

ಇಲಾಖೆ: ಭಾರತೀಯ ವಾಯುಸೇನೆ

ಹುದ್ದೆಯ ಹೆಸರು: ಅಗ್ನಿವೀರವಾಯು

ಹುದ್ದೆಗಳ ಸಂಖ್ಯೆ: ಸುಮಾರು 6000

ಕೆಲಸದ ಸ್ಥಳ: ಭಾರತದಾಧ್ಯಂತ

 

ಕೆಲಸದ ಅವಧಿ/ Working Period:

ಅಗ್ನಿವೀರ ನೇಮಕಾತಿಯು ನಾಲ್ಕು ವರ್ಷಗಳ ಅವಧಿ ಮಾತ್ರವಾಗಿರುತ್ತದೆ. ನಾಲ್ಕು ವರ್ಷಗಳ ನಂತರ ಸೇವೆಯಿಂದ ಬಿಡುಗಡೆಗೊಳಿಸಲಾಗುತ್ತದೆ. ಬಿಡಗಡೆಯ ಸಂದರ್ಭದಲ್ಲಿ ಬೃಹತ್ ಮೊತ್ತದ ಪ್ಯಾಕೇಜ್ ಹಣವನ್ನು ನೀಡಲಾಗುತ್ತದೆ ಜೊತೆಗೆ ರಾಜ್ಯ & ಕೇಂದ್ರ ಸರ್ಕಾರದ ವಿವಿಧ ನೇಮಕಾತಿಗಳಲ್ಲಿ ಮೀಸಲಾತಿ ಸೌಲಭ್ಯವು ದೊರೆಯಲಿದೆ.

 

ವೇತನ/ Salary

Rs. 30000-40000

ಮೂಲವೇತನದ ಜೊತೆಗೆ ಕೇಂದ್ರ ಸರ್ಕಾರದ ನಿಯಮಾವಳಿಗಳನ್ವಯ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಪಿಯುಸಿ / ಡಿಪ್ಲೋಮಾ ವಿದ್ಯಾರ್ಹತೆಯನ್ನು ಮುಗಿಸಿರಬೇಕು.

ಅರ್ಜಿ ಶುಲ್ಕ/ Application Fees:

ಅಭ್ಯರ್ಥಿಗಳು ರೂ. 250/- ಅರ್ಜಿ ಶುಲ್ಕವನ್ನು ಪಾವತಿಸಬೇಕು.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 27-06-2003 ರಿಂದ 27-07-2006 ರ ಒಳಗೆ ಜನಿಸಿರಬೇಕು.

ಕೇಂದ್ರ ಆಹಾರ ಇಲಾಖೆಯಲ್ಲಿ ಖಾಲಿ ಇರುವ ಅಕೌಂಟೆಂಟ್ & MTS ಹುದ್ದೆಗಳಿಗೆ ಅರ್ಜಿ ಆಹ್ವಾನ: NIFTEM Recruitment 2023

ಆಯ್ಕೆವಿಧಾನ/ Selection procedure:

ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ & ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 27.07.2023 ರಿಂದ 17-08.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಅಧಿಕೃತ ವೆಬ್ ಸೈಟ್ https://agnipathvayu.cdac.in     ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 27-07-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-08-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 17-08-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Brief Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click to Share
Bookmark the permalink.

About edutechkannada.com

www.edutechkannada.com Educator

Leave a Reply

Your email address will not be published. Required fields are marked *