ಐಡಿಬಿಐ ಬ್ಯಾಂಕಿನಲ್ಲಿ ಖಾಲಿ ಇರುವ 500 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: IDBI JAM Recruitment 2024
IDBI ಬ್ಯಾಂಕ್ ನಲ್ಲಿ ಖಾಲಿ ಇರುವ ಒಟ್ಟು 500 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 26-02-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
IDBI Bank ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕದ ಆಡಳಿತ ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ:
ಸಂಸ್ಥೆ/ ಇಲಾಖೆ: IDBI Bank
ಹುದ್ದೆಗಳ ಹೆಸರು: ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್
ಹುದ್ದೆಗಳ ಸಂಖ್ಯೆ: 500
ಕೆಲಸದ ಸ್ಥಳ: ಭಾರತದಾಧ್ಯಂತಾ
GM | 203 |
EWS | 75 |
OBC | 135 |
SC | 75 |
ST | 37 |
Total Posts | 500 |
ವೇತನ/ Salary:
ಬ್ಯಾಂಕಿನ ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ವೇತನ ನೀಡಲಾಗುತ್ತದೆ. ಇದರ ಜೊತೆಗೆ DA, HRA ಭತ್ಯೆಗಳು ದೊರೆಯುತ್ತವೆ.
Educational Qualification/ ವಿದ್ಯಾರ್ಹತೆ :
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
Age Limit/ ವಯೋಮಿತಿ: (As on 31-01-2024)
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕನಿಷ್ಟ 20 ವರ್ಷವನ್ನು ಪೂರೈಸಿರತಕ್ಕದ್ದು. ಹಾಗೆಯೇ ಗರಿಷ್ಟ 25 ವಯೋಮಿತಿಯನ್ನು ಮೀರಿರಬಾರದು.
ಗರಿಷ್ಟ ವಯೋಮಿತಿ ಸಡಿಲಿಕೆ
ಎಸ್.ಸಿ, ಎಸ್.ಟಿ ಸೇರಿದ ಅಭ್ಯರ್ಥಿಗಳಿಗೆ : 05 ವರ್ಷ
ಇತರೆ ಹಿಂದೂಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ: 03 ವರ್ಷ
ಅರ್ಜಿ ಶುಲ್ಕ/ Application Fee:
1) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ: ಅರ್ಜಿ ಶುಲ್ಕ ರೂ 200/-
2) ಇತರೆ ವರ್ಗದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 1000/-
3)ಅರ್ಜಿ ಶುಲ್ಕವನ್ನು ಪಾವತಿಸುವುದಕ್ಕೆ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಆನ್ಲೈನ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು.
Selection Process/ ಆಯ್ಕೆವಿಧಾನ:
ಈ ನೇಮಕಾತಿಯ ಆಯ್ಕೆಗೆ ಲಿಖಿತ ಪರೀಕ್ಷೆ / ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ. ಅದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ/ How to apply
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 12.02.2024 ರಿಂದ 26.02.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು IDBI ಯ ವೆಬ್ ಸೈಟ್ www.idbibank.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಕರ್ನಾಟಕ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ 622 ಎಇ, ಜಿಇ ಸೇರಿದಂತೆ ಮುಂತಾದ ಹುದ್ದೆಗಳ ನೇಮಕಾತಿ ಪರೀಕ್ಷೆ
ಪ್ರಮುಖ ದಿನಾಂಕಗಳು/ Important Dates:
ಅರ್ಜಿ ಹಾಕುವ ಪ್ರಾರಂಭದ ದಿನಾಂಕ : 12-02-2024
ಅರ್ಜಿ ಹಾಕುವ ಕೊನೆಯ ದಿನಾಂಕ: 26-02-2024
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 26-02-2024
Important Links/ ಪ್ರಮುಖ ಲಿಂಕುಗಳು:
Pingback: ದಾವಣಗೆರೆಯಲ್ಲಿ 69 ಗೃಹ ರಕ್ಷಕ ಹುದ್ದೆಗಳ ಬೃಹತ್ ಭರ್ತಿಗೆ 10ನೇ ಮುಗಿದವರಿಂದ ಅರ್ಜಿ ಆಹ್ವಾನ: Home Guards Dvg Notification 2024 - EduTech K
Pingback: NIA ನಲ್ಲಿ ಖಾಲಿ ಇರುವ ಗುಮಾಸ್ತ, ಸಹಾಯಕ & ಶೀಘ್ರಲಿಪಿಗಾರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NIA UDC Recruitment 2024 - EduTech Kannada
Pingback: ನಗರಪಾಲಿಕೆಯಲ್ಲಿ ಖಾಲಿ ಇರುವ 93 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: Bijapura City Recruitment 2024 - EduTech Kannada