IGNOU ದಲ್ಲಿ ಖಾಲಿ ಇರುವ 35 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ: IGNOU Professor Jobs 2023
ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ, ನವದೆಹಲಿಯಲ್ಲಿ, ಇಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಪ್ರಾಧ್ಯಾಪಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ನಿಗದಿತ ನಮೂನೆಯನ್ನು ಭರ್ತಿ ಮಾಡಿ ಅಂಚೆ ಮೂಲಕ ಮೂಲಕ ಅರ್ಜಿ ಸಲ್ಲಿಸಲು 20/11/2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
IGNOU ದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಪ್ರಾಧ್ಯಾಪಕರು/ Professor | 17 ಹುದ್ದೆಗಳು |
ಸಹ ಪ್ರಾಧ್ಯಾಪಕರು/ Associate Professor | 11 ಹುದ್ದೆಗಳು |
ಸಹಾಯಕ ಪ್ರಾಧ್ಯಾಪಕರು/ Assistant Professor | 06 ಹುದ್ದೆಗಳು |
ಒಟ್ಟು ಹುದ್ದೆಗಳು | 34 ಹುದ್ದೆಗಳು |
ವೇತನ ಶ್ರೇಣಿ:
UGC ನಿಯಮಾವಳಿಗಳ ಅನ್ವಯ ಕೆಳಗೆ ನಿಗದಿಪಡಿಸಿದ ವೇತನವನ್ನು ನೀಡಲಾಗುತ್ತದೆ.
ಹುದ್ದೆಯ ಹೆಸರು | ವೇತನ ಶ್ರೇಣಿ |
ಪ್ರಾಧ್ಯಾಪಕರು/ Professor | ರೂ. 144200-218200 |
ಸಹ ಪ್ರಾಧ್ಯಾಪಕರು/ Associate Professor | ರೂ. 131400-217100 |
ಸಹಾಯಕ ಪ್ರಾಧ್ಯಾಪಕರು/ Assistant Professor | ರೂ. 57700-182400 |
ವಿದ್ಯಾರ್ಹತೆ ಏನಿರಬೇಕು?
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ & NET/ Phd ಹಾಗೂ ನಿರ್ದಿಷ್ಟಪಡಿಸಿದ ವರ್ಷಗಳ ಸೇವೆಯನ್ನು ಸಲ್ಲಿಸಿದವರು ಈ ಉದ್ಯೋಗಾವಕಾಶಗಳನ್ನು ಪಡೆಯಬಹುದು/ ವಿದ್ಯಾರ್ಹತೆ & ಅನುಭವವಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ:
ಅಧಿಸೂಚನೆಯಲ್ಲಿ ನಿಗದಿಪಡಿಸಿದ ವಯೋಮಿತಿಯನ್ನು ಮೀರಿರಬಾರದು. ಹಾಗೂ ಸರ್ಕಾರದ ನಿಯಮಾವಳಿಗಳ ಅನ್ವಯ ಪಜಾ/ ಪಪಂ ಅಭ್ಯರ್ಥಿಗಳಿಗೆ 05 ವರ್ಷ & ಓಬಿಸಿ ವರ್ಗದವರಿಗೆ 03 ವರ್ಷ ಸಡಿಲಿಕೆ ಸಿಗುತ್ತದೆ.
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು ಕೆಳಗಿನ ನೀಡಿರುವ ಲಿಂಕ್ ನಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ದಿನಾಂಕ 20-11-2023 ರ ಒಳಗಾಗಿ Speed Post/ Register Post ಮುಖಾಂತರ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ & ನೋಟಿಫಿಕೇಶನ್ ಗಳನ್ನು ಕೆಳಗಿನ ಲಿಂಕ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 20-11-2023
ಅಧಿಕೃತ ಲಿಂಕ್/ Official Links:
ಅರ್ಜಿ ನಮೂನೆ/ Application Form
Pingback: ಕರ್ನಾಟಕ ಆಹಾರ ಇಲಾಖೆಯಿಂದ ಖಾಲಿ ಇರುವ 1150 SDA, FDA, ಚಾಲಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ: ಹೊಸ ಹುದ್ದೆಗಳ ಸೃ
Pingback: ಬೆಂಗಳೂರಿನ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: NACIN Bengaluru Recruitment 2023 - EduTe