IGNOU ದಲ್ಲಿ ಖಾಲಿ ಇರುವ 35 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ: IGNOU Professor Recruitment 2023

Click to Share

IGNOU ದಲ್ಲಿ ಖಾಲಿ ಇರುವ 35 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ: IGNOU Professor Recruitment 2023

ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ, ನವದೆಹಲಿಯಲ್ಲಿ, ಇಲ್ಲಿ ಖಾಲಿ ಇರುವ  ವಿವಿಧ ವಿಷಯಗಳ ಪ್ರಾಧ್ಯಾಪಕ   ಹುದ್ದೆಗಳನ್ನು  ನೇರ ನೇಮಕಾತಿ ಮೂಲಕ ಭರ್ತಿ ಮಾಡಲು  ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ನಿಗದಿತ ನಮೂನೆಯನ್ನು ಭರ್ತಿ ಮಾಡಿ ಅಂಚೆ ಮೂಲಕ ಮೂಲಕ ಅರ್ಜಿ ಸಲ್ಲಿಸಲು 20/11/2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ನೇಮಕಾತಿ ಅಧಿಸೂಚನೆ: KHPT Recruitment 2023

IGNOU ದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಖಾಲಿ ಇರುವ 808 ಉಪನ್ಯಾಸಕರು & ಶಿಕ್ಷಕರು ಹುದ್ದೆಗಳ ನೇಮಕಾತಿ: KREIS Recruitment 2023

 

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಪ್ರಾಧ್ಯಾಪಕರು/ Professor 17 ಹುದ್ದೆಗಳು
ಸಹ ಪ್ರಾಧ್ಯಾಪಕರು/ Associate Professor 11 ಹುದ್ದೆಗಳು
ಸಹಾಯಕ ಪ್ರಾಧ್ಯಾಪಕರು/ Assistant Professor 06 ಹುದ್ದೆಗಳು
ಒಟ್ಟು ಹುದ್ದೆಗಳು 34 ಹುದ್ದೆಗಳು

 

ವೇತನ ಶ್ರೇಣಿ:

UGC ನಿಯಮಾವಳಿಗಳ ಅನ್ವಯ ಕೆಳಗೆ ನಿಗದಿಪಡಿಸಿದ ವೇತನವನ್ನು ನೀಡಲಾಗುತ್ತದೆ.

ಹುದ್ದೆಯ ಹೆಸರು ವೇತನ ಶ್ರೇಣಿ
ಪ್ರಾಧ್ಯಾಪಕರು/ Professor ರೂ. 144200-218200
ಸಹ ಪ್ರಾಧ್ಯಾಪಕರು/ Associate Professor ರೂ. 131400-217100
ಸಹಾಯಕ ಪ್ರಾಧ್ಯಾಪಕರು/ Assistant Professor ರೂ. 57700-182400

ವಿದ್ಯಾರ್ಹತೆ ಏನಿರಬೇಕು?

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ & NET/ Phd ಹಾಗೂ ನಿರ್ದಿಷ್ಟಪಡಿಸಿದ ವರ್ಷಗಳ ಸೇವೆಯನ್ನು ಸಲ್ಲಿಸಿದವರು ಈ ಉದ್ಯೋಗಾವಕಾಶಗಳನ್ನು ಪಡೆಯಬಹುದು/  ವಿದ್ಯಾರ್ಹತೆ & ಅನುಭವವಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ  ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ವಯೋಮಿತಿ:

ಅಧಿಸೂಚನೆಯಲ್ಲಿ ನಿಗದಿಪಡಿಸಿದ ವಯೋಮಿತಿಯನ್ನು ಮೀರಿರಬಾರದು. ಹಾಗೂ ಸರ್ಕಾರದ ನಿಯಮಾವಳಿಗಳ ಅನ್ವಯ ಪಜಾ/ ಪಪಂ ಅಭ್ಯರ್ಥಿಗಳಿಗೆ 05 ವರ್ಷ & ಓಬಿಸಿ ವರ್ಗದವರಿಗೆ 03 ವರ್ಷ ಸಡಿಲಿಕೆ ಸಿಗುತ್ತದೆ.

 

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

 

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ಕೆಳಗಿನ ನೀಡಿರುವ  ಲಿಂಕ್ ನಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ದಿನಾಂಕ 20-11-2023 ರ ಒಳಗಾಗಿ Speed Post/ Register Post ಮುಖಾಂತರ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ & ನೋಟಿಫಿಕೇಶನ್ ಗಳನ್ನು ಕೆಳಗಿನ ಲಿಂಕ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಿ.

ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 20-11-2023

 

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application Form

ಅಧಿಸೂಚನೆ/ Notification

Official Website


Click to Share
Bookmark the permalink.

About edutechkannada.com

www.edutechkannada.com Educator