ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನ: IPPB Executive Apply Online 2024
ಭಾರತೀಯ ಅಂಚೆ ಪಾವತಿ ಬ್ಯಾಂಕ್ ನಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ (Executive) ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 05/04/2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
Indian Postal Bank ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಇಂಟಲಿಜೆನ್ಸ್ ಬ್ಯೂರೋ ದಲ್ಲಿ ಖಾಲಿ ಇರುವ 660 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: IB Recruitment 2024
ಹುದ್ದೆಗಳ ವಿವರವನ್ನು ಗಮನಿಸಿ:
ಇಲಾಖೆ/ ಸಂಸ್ಥೆ | ಭಾರತೀಯ ಅಂಚೆ ಪಾವತಿ ಬ್ಯಾಂಕ್ |
ಹುದ್ದೆಯ ಹೆಸರು | ಎಕ್ಸಿಕ್ಯೂಟಿವ್ |
ಹುದ್ದೆಗಳ ಸಂಖ್ಯೆ | 47 ಹುದ್ದೆಗಳು |
ಕೆಲಸದ ಸ್ಥಳ | ದೇಶದಾದ್ಯಂತಾ |
ಹುದ್ದೆಗಳ ಹಂಚಿಕೆ:
ವರ್ಗ | ಹುದ್ದೆಗಳ ಸಂಖ್ಯೆ |
ಪರಿಶಿಷ್ಟ ಜಾತಿ | 07 |
ಪರಿಶಿಷ್ಟ ಪಂಗಡ | 03 |
EWS | 04 |
ಸಾಮಾನ್ಯ ವರ್ಗ | 21 |
OBC | 12 |
ಒಟ್ಟು ಹುದ್ದೆಗಳು | 47 |
ವೇತನ ಶ್ರೇಣಿ:
ಅಂಚೆ ಇಲಾಖೆಯ ನಿಯಮಾವಳಿಗಳ ಅನ್ವಯ ರೂ. 30000/-ವೇತನ ನೀಡಲಾಗುತ್ತದೆ.
ವಿದ್ಯಾರ್ಹತೆ ಏನಿರಬೇಕು?
ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
ವಯೋಮಿತಿ:
ಅಭ್ಯರ್ಥಿಗಳು ಕನಿಷ್ಟ 21 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
GM/ OBC/ EWS | 750/- |
SC/ ST/ PWD | 150/- |
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದಲ್ಲಿ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು ಭಾರತೀಯ ಅಂಚೆ ಪಾವತಿ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ https://www.ippbonline.com/ ದಿನಾಂಕ 15-03-2024 ರಿಂದ 05-04-2024 ರ ಒಳಗಾಗಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 15-03-2024
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 05-04-2024
ಅಧಿಕೃತ ಲಿಂಕ್/ Official Links:
Pingback: ವಿಮಾನ ಇಲಾಖೆಯಲ್ಲಿ ಖಾಲಿ ಇರುವ 490 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ- AAI 490 Vacancies Jobs 2024 - EduTech Kannada