ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನ: IPPB Executive Apply Online 2024

Click to Share

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನ: IPPB Executive Apply Online 2024

ಭಾರತೀಯ ಅಂಚೆ ಪಾವತಿ ಬ್ಯಾಂಕ್ ನಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ (Executive) ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 05/04/2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಪ್ರೌಢ ಶಿಕ್ಷಣ ಮಂಡಳಿಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಸೆಕ್ರೆಟರಿ, ಜೂನಿಯರ್ ಅಕೌಂಟೆಂಟ್ & ಜೆಇ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

Indian Postal Bank ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಇಂಟಲಿಜೆನ್ಸ್ ಬ್ಯೂರೋ ದಲ್ಲಿ ಖಾಲಿ ಇರುವ 660 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: IB Recruitment 2024

ಹುದ್ದೆಗಳ ವಿವರವನ್ನು ಗಮನಿಸಿ:

ಇಲಾಖೆ/ ಸಂಸ್ಥೆ ಭಾರತೀಯ ಅಂಚೆ ಪಾವತಿ ಬ್ಯಾಂಕ್
ಹುದ್ದೆಯ ಹೆಸರು ಎಕ್ಸಿಕ್ಯೂಟಿವ್
ಹುದ್ದೆಗಳ ಸಂಖ್ಯೆ 47 ಹುದ್ದೆಗಳು
ಕೆಲಸದ ಸ್ಥಳ ದೇಶದಾದ್ಯಂತಾ

ಹುದ್ದೆಗಳ ಹಂಚಿಕೆ:

ವರ್ಗ ಹುದ್ದೆಗಳ ಸಂಖ್ಯೆ
ಪರಿಶಿಷ್ಟ ಜಾತಿ 07
ಪರಿಶಿಷ್ಟ ಪಂಗಡ 03
EWS 04
ಸಾಮಾನ್ಯ ವರ್ಗ 21
OBC 12
ಒಟ್ಟು ಹುದ್ದೆಗಳು 47

ವೇತನ ಶ್ರೇಣಿ:

ಅಂಚೆ ಇಲಾಖೆಯ ನಿಯಮಾವಳಿಗಳ ಅನ್ವಯ ರೂ. 30000/-ವೇತನ ನೀಡಲಾಗುತ್ತದೆ.

ವಿದ್ಯಾರ್ಹತೆ ಏನಿರಬೇಕು?

ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆ  ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಟ 21 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

GM/ OBC/ EWS 750/-
SC/ ST/ PWD 150/-

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದಲ್ಲಿ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ಭಾರತೀಯ ಅಂಚೆ ಪಾವತಿ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ https://www.ippbonline.com/ ದಿನಾಂಕ 15-03-2024 ರಿಂದ 05-04-2024 ರ ಒಳಗಾಗಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.

ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: UAS Bengaluru Assistant Jobs 2024

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 15-03-2024

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 05-04-2024

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application Form

ಅಧಿಸೂಚನೆ/ Notification

Official Website


Click to Share
Bookmark the permalink.

About edutechkannada.com

www.edutechkannada.com Educator

One Response to ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನ: IPPB Executive Apply Online 2024

  1. Pingback: ವಿಮಾನ ಇಲಾಖೆಯಲ್ಲಿ ಖಾಲಿ ಇರುವ 490 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ- AAI 490 Vacancies Jobs 2024 - EduTech Kannada

Leave a Reply

Your email address will not be published. Required fields are marked *