ಕರ್ನಾಟಕ ಲೋಕಾಯುಕ್ತದಲ್ಲಿ ಪಿಯುಸಿ ಮುಗಿದವರಿಗೆ 30 ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: Karnataka Lokayukta Recruitment 2024
ಕರ್ನಾಟಕ ಲೋಕಾಯುಕ್ತ, ಬೆಂಗಳೂರು ವತಿಯಿಂದ ನೇಮಕಾತಿ ಅಧಿಸೂಚನೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 29-11-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ಲೋಕಾಯುಕ್ತದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಜಿಲ್ಲಾ ಆಯುಷ್ ಕಾರ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 52000/-
ಹುದ್ದೆಗಳ ವಿವರ/ Post Details:
ಹುದ್ದೆಗಳ ಹೆಸರು : ಕ್ಲರ್ಕ್ ಕಮ್ ಟೈಪಿಸ್ಟ್
ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಹುದ್ದೆಗಳು: 16 |
ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವ ಹುದ್ದಗಳು: 14 |
ಒಟ್ಟು ಹುದ್ದೆಗಳು- 30 |
ವೇತನ/ Salary Scale:
ಕ್ಲರ್ಕ್ ಕಮ್ ಟೈಪಿಸ್ಟ್ ವೇತನ ಶ್ರೇಣಿ: 34100-67600 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು & ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಬೆರಳಚ್ಚು ಕಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರಬೇಕು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 38 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fees:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, & ಅಂಗವಿಕಲ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ಇದೆ.
ಇತರೆ ಅಭ್ಯರ್ಥಿಗಳಿಗೆ: ರೂ. 250/- ಮಾತ್ರ
ಅರ್ಜಿ ಶುಲ್ಕವನ್ನು Canara Bank Collect ಮೂಲಕ Net Banking, Credit Card, Debit Card, UPI ID ಸೌಲಭ್ಯವನ್ನು ಬಳಸಿಕೊಂಡು ಪಾವತಿಸಬೇಕು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 30.10.2024 ರಿಂದ 29.11.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು lokayukta.kar.nic.in ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ 1170 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 30-10-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 29-11-2024
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: KK & RPC