ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಧಿಸೂಚನೆ: ಭಾರತೀಯ ಸೇನೆಗೆ ಸೇರಲು ಉಚಿತ ತರಬೇತಿ: Karnataka OBC Army Training 2023

Click to Share

ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಧಿಸೂಚನೆ: ಭಾರತೀಯ ಸೇನೆಗೆ ಸೇರಲು ಉಚಿತ ತರಬೇತಿ: Karnataka OBC Army Training 2023

ಭಾರತೀಯ ಸೇನೆಯಲ್ಲಿ ಉದ್ಯೋಗ ಬಯಸುತ್ತಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರದ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸಿಹಿ ಸುದ್ದಿ ಬಂದಿದೆ.  ಭಾರತೀಯ ಸೇನೆಗೆ ಸೇರುವ ಅಭ್ಯರ್ಥಿಗಳಿಗೆ ಉಚಿತ ತರಬೇತಿಯನ್ನು ಆಯೋಗಿಸಲಾಗಿದೆ. ಈ ಪೂರ್ವಸಿದ್ದತಾ ತರಬೇತಿಯನ್ನು ಸೇರ ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾದ ಷರತ್ತುಗಳನ್ನು ಪೂರೈಸಿರಬೇಕು ಮತ್ತು ಕೊನೆಯ ದಿನಾಂಕದ ಒಳಗಾಗಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಆಡಳಿತ ಸಹಾಯಕ & ಸಹಾಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 30000

ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ & ಆಸಕ್ತ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ  ನೀಡುತ್ತಿದ್ದು, ತರಬೇತಿಗಾಗಿ ಅರ್ಹ & ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ (ಬಾಲಕರಿಗೆ ಮಾತ್ರ).

ಧಾರವಾಡದ ತಾಂತ್ರಿಕ ಸಂಸ್ಥೆಯಲ್ಲಿ ಖಾಲಿ ಇರುವ ಲೈಬ್ರೆರಿ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- IIT Dharwad recruitment 2023

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಗೊಳಿಸಿರುವ ಸಾಮಾನ್ಯ ಅರ್ಹತೆಗಳು:

ಆದಾಯ ಮಿತಿ/ Income Limit:

ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಠ ವಾರ್ಷಿಕ ಆದಾಯ ಮಿತಿ- (ಪ್ರವರ್ಗ-1 ಕ್ಕೆ ರೂ.2.50 ಲಕ್ಷಗಳು ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ರೂ.1.00 ಲಕ್ಷಗಳು)

ಕನಿಷ್ಠ ವಿದ್ಯಾರ್ಹತೆ / Minimum Education:

ಅಭ್ಯರ್ಥಿಯು 10ನೇ ತರಗತಿಯನ್ನು ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಮೇಲ್ಕಂಡಂತೆ ಸಮಾನವಾದ ಗ್ರೇಡ್ ಪಡೆದಿರಬೇಕು.

ವಯೋಮಿತಿ/ Age Limit:

ಜನ್ಮ ದಿನಾಂಕ ಮತ್ತು ವಯಸ್ಸು (10ನೇ ತರಗತಿಯ ಅಂಕ ಪಟ್ಟಿಯಲ್ಲಿರುವಂತೆ) ಡಿಸೆಂಬರ್ 31, 2023 ಕೈ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು ಪರಿಗಣಿಸಲಾಗುವುದು. ಅಭ್ಯರ್ಥಿಯು 01 ಜನವರಿ 2003 ರಿಂದ 01 ಜುಲೈ 2006 (17% ಎರ್ಷದಿಂದ 21 ವರ್ಷ) ರ ದಿನಾಂಕಗಳ ನಡುವೆ ಜನಿಸಿರಬೇಕು.

ತರಬೇತಿ ನೀಡುವ ಸ್ಥಳಗಳು/ Place of Training:

ತರಬೇತಿಯನ್ನು ದಕ್ಷಿಣಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು. ಅಭ್ಯರ್ಥಿಗಳು ಸದರಿ ಮೂರು ಜಿಲ್ಲೆಗಳಲ್ಲಿ ತರಬೇತಿಗೆ ಆಯ್ಕೆ ಮಾಡಿಕೊಳ್ಳುವ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.

ನೈಋತ್ಯ ರೈಲ್ವೇ ಹುಬ್ಬಳ್ಳಿಯಲ್ಲಿ ಖಾಲಿ ಇರುವ 713 ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖಾ ವೆಬ್-ಸೈಟ್ https://bcwd.karnataka.gov.in ನಿಂದ ಪಡೆಯಬಹುದಾಗಿದೆ.

ಪ್ರಮುಖ ದಿನಾಂಕಗಳು/ Important Dates:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ನೇ ಸೆಪ್ಟೆಂಬರ್ 2023.

ಸಹಾಯವಾಣಿ: (ಸಮಯ ಬೆಳಗ್ಗೆ 10.00 ರಿಂದ ಸಂಜೆ 5.30ರ ವರೆಗೆ, ಸಾರ್ವಜನಿಕ ರಜಾ ದಿನಗಳನ್ನು ಹೊರತು ಪಡಿಸಿ)

ದಕ್ಷಿಣ ಕನ್ನಡ ಜಿಲ್ಲೆ: ದೂ.ಸಂ.0824-2225078. ಆ) ಉಡುಪಿ ಜಿಲ್ಲೆ: ದೂ.ಸಂ.0820-2574881.

ಉತ್ತರ ಕನ್ನಡ: ದೂ.ಸಂ.08382-226589. ಈ) ಕೇಂದ್ರ ಕಛೇರಿ: 8050770004, DIPRICP

ಪ್ರಮುಖ ಲಿಂಕುಗಳು/ Important Links:

Notification

Application

Website


Click to Share
Bookmark the permalink.

About edutechkannada.com

www.edutechkannada.com Educator

Leave a Reply

Your email address will not be published. Required fields are marked *