ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ: Karnataka OBC Hostel Entrance 2023

Click to Share

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ: Karnataka OBC Hostel Entrance 2023

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಸಾಮನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಕಾರ್ಮಿಕ ಇಲಾಖೆಯಲ್ಲಿ SDA, FDA ಹುದ್ದೆಗಳಿಗೆ ಪಿಯುಸಿ/ ಯಾವುದೇ ಪದವಿ ಮುಗಿದವರು ಅರ್ಜಿ ಹಾಕಿ: KEA KARBWWB Recruitment 2023

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ :

ಪ್ರವರ್ಗ-1, ಎಸ್.ಸಿ & ಎಸ್.ಟಿ.  ರೂ. 2.5 ಲಕ್ಷ
ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ. 1 ಲಕ್ಷ

ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Ayush CCRAS Recruitment 2023

Important Instructions:

ವಿದ್ಯಾರ್ಥಿಗಳು https://shp.karnataka.gov.in ಅನ್ನು ಸಂಪರ್ಕಿಸಿ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16.08.2023 

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ ನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು.

NCDC ಯಲ್ಲಿ ಖಾಲಿ ಇರುವ ಸೆಕ್ರೆಟೇರಿಯಲ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NCDC Recruitment 2023

ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆ 8050770005

2023-24ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ಪ್ರವೇಶ ಕಲ್ಪಿಸಲು ನಿಗದಿಪಡಿಸಿರುವ ಪ್ರಮುಖ ದಿನಾಂಕಗಳು:

 ಹೊಸ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 26.07.2023

ಹೊಸ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :16.08.2023

ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆಯಾದ ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಪ್ರಕಟಣೆಯ ದಿನಾಂಕ: 21.08.2023

ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ನಿಗದಿಪಡಿಸಿದ ಅಂತಿಮ ದಿನಾಂಕ   :  25.08.2023

ಆಸಕ್ತ ವಿದ್ಯಾರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಹೆಚ್ಚಿನ ವಿವರಗಳನ್ನು ಪಡೆಯಬಹದು.

Notification/ ಅಧಿಸೂಚನೆ


Click to Share
Bookmark the permalink.

About edutechkannada.com

www.edutechkannada.com Educator

2 Responses to ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ: Karnataka OBC Hostel Entrance 2023

  1. Amrutha v says:

    Super

Leave a Reply

Your email address will not be published. Required fields are marked *