KEA ಯಿಂದ 4 ಇಲಾಖೆಗಳಲ್ಲಿ ಖಾಲಿ ಇರುವ 670 ಹುದ್ದೆಗಳ ಸಂಬಂಧ ಪರಿಷ್ಕೃತ ಅಧಿಸೂಚನೆ ಪ್ರಕಟ: ಅರ್ಜಿ ಶುಲ್ಕ ಕಡಿಮೆ: KEA Revised Notification 2023
ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ
(ಎ) ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ,
(ಬಿ) ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ,
(ಸಿ) ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಮತ್ತು
(ಡಿ) ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಬೆಂಗಳೂರು,
ಕರ್ನಾಟಕ ಸರ್ಕಾರದ ಅಡಿಯಲ್ಲಿ ಬರುವ ಮೇಲಿನ ಸಂಸ್ಥೆಗಳಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳಿಯ) ವೃಂದದ ಒಟ್ಟು 670 ಹುದ್ದೆಗಳ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 26-07-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಯಲ್ಲಿ ಕೆಇಎ ಯಿಂದ ನಿಗದಿಪಡಿಸಲಾಗಿದ್ದ ಅರ್ಜಿ ಶುಲ್ಕದ ದರವನ್ನು ಕಡಿಮೆ ಮಾಡಿ ಮತ್ತೊಂದು ತಿದ್ದುಪಡಿ ಅಧಿಸೂಚನೆಯನ್ನು ದಿನಾಂಕ 27-06-2023 ರಂದು ಬಿಡುಗಡೆ ಮಾಡಿದೆ.
ಹುದ್ದೆಗಳು ಖಾಲಿ ಇರುವ ಇಲಾಖೆಗಳು/ Departments
(ಎ) ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ – 186
(ಬಿ) ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ – 386
(ಸಿ) ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ – 26
(ಇ) ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಬೆಂಗಳೂರು – 72
ಒಟ್ಟು ಹುದ್ದೆಗಳು: 670 ಹುದ್ದೆಗಳು
ಪ್ರಸ್ತುತ ಪರಿಷ್ಕರಣೆಯಾಗಿರುವ ಅರ್ಜಿ ಶುಲ್ಕ ಕೆಳಗಿನಂತಿದೆ:
ಸಾಮಾನ್ಯ ವರ್ಗ | ರೂ. 500/- |
2ಎ, 2ಬಿ, 3ಎ & 3ಬಿ | ರೂ. 300/- |
ಎಸ್.ಸಿ ,ಎಸ್.ಟಿ & ಪ್ರವರ್ಗ 1 | ರೂ. 200/- |
ವಿಕಲಚೇತನರು & ಮಾಜಿ ಸೈನಿಕರು | ರೂ. 100/- |
ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಕಂಪ್ಯೂಟರೈಸ್ಡ್ ಅಂಚೆ ಕಛೇರಿಗಳಲ್ಲಿ ಮಾತ್ರ ಕಛೇರಿ ಸಮಯದಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದು. ಇನ್ಯಾವುದೇ ಮುಖಾಂತರ ಅರ್ಜಿ ಶುಲ್ಕ ಪಾವತಿಸುವ ಅವಕಾಶ ಇರುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ/ How to Apply
ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ನೀಡಲಾಗಿರುವ ಸೂಕ್ತ ಲಿಂಕ್ ಬಳಸಿಕೊಂಡು 26-07-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಪರೀಕ್ಷೆಯ ವೇಳಾಪಟ್ಟಿ/ Schedule of Exam:
ಈ ಅಧಿಸೂಚನೆಯಲ್ಲಿ ಸೂಚಿಸಲಾಗಿರುವ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು 2023 ರ ಸೆಪ್ಟಂಬರ್-ಅಕ್ಟೋಬರ್ ಅವಧಿಯಲ್ಲಿ ನಡೆಸುವ ಸಾಧ್ಯತೆ ಇದ್ದು, ಸ್ಪರ್ಧಾತ್ಮಕ ಪರೀಕ್ಷೆಯನ್ನು ಬೆಂಗಳೂರಿನಲ್ಲಿ ಮಾತ್ರ ನಡೆಸಲಾಗುವುದು. ಅಭ್ಯರ್ಥಿಗಳು ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು.
Important Dates/ ಪ್ರಮುಖ ದಿನಾಂಕಗಳು:
ಆನ್ಲೈನ್ ಅರ್ಜಿ ಆರಂಭವಾಗುವ ದಿನಾಂಕ: 23-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-07-2023
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 25-07-2023
Important Links/ ಪ್ರಮುಖ ಲಿಂಕುಗಳು:
ತಿದ್ದುಪಡಿ ಅಧಿಸೂಚನೆ/Revised Notification
Interst job
Pingback: ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಭರ್ತಿ 2023: ಕಿರಿಯ ಸಹಾಯಕ, ಸಂಚಾರ ನಿಯಂತ್ರಕ, ನಿರ್ವಾಹಕ & ಡಾಟಾ ಎಂಟ್ರಿ ಆಪರೇಟರ್
Pingback: ರೆಪ್ಕೋ ಮೈಕ್ರೊ ಫೈನಾನ್ಸ್ ನಲ್ಲಿ ಖಾಲಿ ಇರುವ ಆಡಳಿತ ಸಹಾಯಕ & ಇತರೆ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಯಾವ
Pingback: NEST ನಲ್ಲಿ ಖಾಲಿ ಇರುವ 2570 ಪಿಜಿಟಿ ಶಿಕ್ಷಕರು & ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: NEST Teacher Recruitment 2023 - edutechkannada.com