KEA ಯಿಂದ ಮತ್ತೊಂದು ಹೊಸ ನೇಮಕಾತಿ ಅಧಿಸೂಚನೆ ಪ್ರಕಟ| 100 ಹುದ್ದೆಗಳಿಗೆ ಅರ್ಜಿ ಆಹ್ವಾನ| KEA Staff Nurse Recruitment 2023

Click to Share

KEA ಯಿಂದ ಮತ್ತೊಂದು ಹೊಸ ನೇಮಕಾತಿ ಅಧಿಸೂಚನೆ ಪ್ರಕಟ| 100 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಶ್ರೀ ಜಯದೇವ ಹೃದ್ರೋಗ ವಿಜ್ಞಾನ & ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಸ್ಟಾಫ್ ನರ್ಸ್  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು KEA ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 2 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ಜೂ. ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Government employees coop bank recruitment  2023

ಶ್ರೀ ಜಯದೇವ ಹೃದ್ರೋಗ ವಿಜ್ಞಾನ & ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ  ವಸತಿ ಶಿಕ್ಷಣ ಸಂಸ್ಥೆ (ಕ್ರೈಸ್) ಯಲ್ಲಿ ಖಾಲಿ ಇರುವ 808 ಉಪನ್ಯಾಸಕರು & ಶಿಕ್ಷಕರು ಹುದ್ದೆಗಳ ನೇಮಕಾತಿ: KREIS Morarji Desai Jobs 2023

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಗಳ ಹೆಸರು: ಸ್ಟಾಫ್ ನರ್ಸ್ 

ಉಳಿಕೆ ಮೂಲ ವೃಂದ: 92 ಹುದ್ದೆಗಳು
ಕಲ್ಯಾಣ ಕರ್ನಾಟಕ ವೃಂದ: 08 ಹುದ್ದೆಗಳು
ಒಟ್ಟು ಹುದ್ದೆಗಳು: 100

ವೇತನ ಶ್ರೇಣಿ:

ಶ್ರೀ ಜಯದೇವ ಹೃದ್ರೋಗ ವಿಜ್ಞಾನ & ಸಂಶೋಧನಾ ಸಂಸ್ಥೆಯ ನಿಯಮಾನುಸಾರ ವೇತನ ನೀಡಲಾಗುತ್ತದೆ.

ವಿದ್ಯಾರ್ಹತೆ ಏನಿರಬೇಕು?

ಅಂಗೀಕೃತ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಬಿಎಸ್ಸಿ ನರ್ಸಿಂಗ್ ಪದವಿಯನ್ನು ಮುಗಿಸಿರಬೇಕು. 

ವಯೋಮಿತಿ:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು

ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

ಸಾಮಾನ್ಯ ವರ್ಗ ರೂ. 500/-
2ಎ, 2ಬಿ, 3ಎ & 3ಬಿ ರೂ. 300/-
ಎಸ್.ಸಿ ,ಎಸ್.ಟಿ & ಪ್ರವರ್ಗ 1 ರೂ. 200/-
ವಿಕಲಚೇತನರು & ಮಾಜಿ ಸೈನಿಕರು ರೂ. 100/-

 

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು KEA ಅಧಿಕೃತ ವೆಬ್ಸೈಟ್ kea.kar.nic.in  ವೆಬ್ಸೈಟ್ ನಲ್ಲಿ ದಿನಾಂಕ 02-11-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

 ಶಿಕ್ಷಣ ಇಲಾಖೆಯಲ್ಲಿ ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಸೇರಿ ವಿವಿಧ ಸಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ- NITTTRC Jobs Notification 2023

 

ಅರ್ಜಿ ಸಲ್ಲಿಸುವ ದಿನಾಂಕಗಳು:

ಪ್ರಾರಂಭದ ದಿನಾಂಕ: 04-10-2023

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 02-11-2023

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 04-11-2023

 

ಅಧಿಕೃತ ಲಿಂಕ್/ Official Links:

Apply Online

Notification

Official Website


Click to Share
Bookmark the permalink.

About edutechkannada.com

www.edutechkannada.com Educator

2 Responses to KEA ಯಿಂದ ಮತ್ತೊಂದು ಹೊಸ ನೇಮಕಾತಿ ಅಧಿಸೂಚನೆ ಪ್ರಕಟ| 100 ಹುದ್ದೆಗಳಿಗೆ ಅರ್ಜಿ ಆಹ್ವಾನ| KEA Staff Nurse Recruitment 2023

  1. Ranganatha says:

    Magadi ‘t’ ramanagar ‘g’ Kalya past basavanapalya
    Kalya

  2. Pingback: HAL ನಲ್ಲಿ ಖಾಲಿ ಇರುವ ಅಗ್ನಿಶಾಮಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: HAL Fireman Jobs 2023 - edutechkannada.com

Leave a Reply

Your email address will not be published. Required fields are marked *