ಕಂದಾಯ ಇಲಾಖೆಯ 1000 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಅತ್ಯಂತ ತುರ್ತು ಮಾಹಿತಿ: KEA VAO Exam Update 2024
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಕುರಿತಂತೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆಗಳನ್ನು ನೀಡಿದೆ. ಕೆಇಎ ಮಾಹಿತಿಯ ಪ್ರಕಾರ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಸುಮಾರು 9 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ ಅದರಲ್ಲಿ 570000 ಕ್ಕೂ ಹೆಚ್ಚು ಅಭ್ಯರ್ಥಿಗಳ ಅರ್ಜಿಗಳು ಸಿಂಧುವಾಗಿವೆ. ಅರ್ಜಿ ಸಲ್ಲಿಸಿದವರು ತಮ್ಮ ಅರ್ಜಿಯ ಸ್ಟೇಟಸ್ ಅನ್ನು ವೆಬ್ಸೈಟ್ ನಲ್ಲಿ ಪರಿಶೀಲಿಸಬಹುದು. ಈ ಹುದ್ದೆಗಳ ಭರ್ತಿಗೆ ಸೆಪ್ಟೆಂಬರ್ 29 ಹಾಗೂ ಅಕ್ಟೋಬರ್ 27 ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಸೆಪ್ಟೆಂಬರ್ 29 ರಂದು ನಡೆಸಲಾಗುವ ಕಡ್ಡಾಯ ಕನ್ನಡ ಪರೀಕ್ಷೆಯ ಕುರಿತಾದ ಸೂಚನೆಗಳನ್ನು ಕೆಇಎ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಲಟಣೆಯ ಅಂಶಗಳು ಕೆಳಗಿನಂತಿವೆ..
ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ 58 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 32000/-
ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ದಿನಾಂಕ 29.09.2024 ರಂದು ಕಡ್ಡಾಯ ಕನ್ನಡ ಪರೀಕ್ಷೆಯನ್ನು ನಡೆಸಲು ವೇಳಾ ಪಟ್ಟಿಯನ್ನು ಈಗಾಗಲೇ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿರುತ್ತದೆ. ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು, 2021 ರಲ್ಲಿ ನಿರ್ದೇಶಿಸಿರುವಂತೆ ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಿ 150 ಅಂಕಗಳಿಗೆ ಕನಿಷ್ಟ 50 ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿರುತ್ತದೆ.
ಆದ್ದರಿಂದ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿರುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಭಾಷೆ ಪರೀಕ್ಷೆಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ತಪ್ಪದೆ ಪರೀಕ್ಷೆಗೆ ಹಾಜರಾಗತಕ್ಕದ್ದು. ಕಡ್ಡಾಯ ಕನ್ನಡ ಭಾಷೆ ಪರೀಕ್ಷೆಗೆ ಹಾಜರಾಗಿ ಅರ್ಹರಾಗುವ ಅಭ್ಯರ್ಥಿಗಳಿಗೆ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗೆ ಅವಕಾಶ ನೀಡಲಾಗುವುದು. ಕಡ್ಡಾಯ ಕನ್ನಡ ಭಾಷೆ ಪರೀಕ್ಷೆಗೆ ಗೈರು ಹಾಜರಾದ ಅಭ್ಯರ್ಥಿಗಳಿಗೆ ಮತ್ತು ಹಾಜರಾಗಿ ಕನಿಷ್ಠ 50 ಅಂಕಗಳನ್ನು ಪಡೆಯದ ಅಭ್ಯರ್ಥಿಗಳಿಗೆ ದಿನಾಂಕ: 27.10.2024 ರಂದು ನಡೆಯಲಿರುವ ಪತ್ರಿಕೆ-1 ಮತ್ತು ಪತ್ರಿಕೆ-2 ರ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಲು ಅವಕಾಶವಿರುವುದಿಲ್ಲ.
ಕೆನರಾ ಬ್ಯಾಂಕ್ ಸೇರಿ ವಿವಿಧ ಬ್ಯಾಂಕುಗಳಲ್ಲಿ 4455 ಪ್ರೊಬೆಷನರಿ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಿಕೆಯ ಪ್ರಕ್ರಿಯೆ ಪೂರ್ಣಗೊಳಿಸಿರುವ ಅಭ್ಯರ್ಥಿಗಳ ಅರ್ಜಿ ಸ್ಥಿತಿ (Application Status)ನ್ನು ತಿಳಿಯಲು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಲಿಂಕ್ ನೀಡಲಾಗಿದೆ. ಪ್ರಕಟಿತ ಲಿಂಕ್‌ನಲ್ಲಿ ಅಭ್ಯರ್ಥಿಗಳ ಅರ್ಜಿಯು ಅಂಗೀಕೃತವಾಗದಿದ್ದಲ್ಲಿ, ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ ಶುಲ್ಕ ಪಾವತಿಸಿರುವ ಬಗ್ಗೆ ಪೂರಕ ದಾಖಲೆಗಳನ್ನು ದಿನಾಂಕ 26.08.2024 ರೊಳಗೆ ಪ್ರಾಧಿಕಾರಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸುವಂತೆ ತಿಳಿಸಲಾಗಿದೆ. ಪೂರಕ ದಾಖಲೆಗಳಿಲ್ಲದ ಮನವಿಗಳನ್ನು ಪುರಸ್ಕರಿಸಲಾಗುವುದಿಲ್ಲ.
ಅಧಿಕೃತ ಲಿಂಕುಗಳು/ Official Links
ಅರ್ಜಿ ಸ್ಥಿತಿ/ Application Status
Pingback: ಕರ್ನಾಟಕದ ವಿಶ್ವವಿದ್ಯಾಲಯದ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಪಿಯು ಉಪನ್ಯಾಸಕರು & ಬೋಧನಾ ಸಹಾಯಕರು ಭರ
Pingback: ರೈಲ್ವೇ ಇಲಾಖೆಯಲ್ಲಿ ಒಟ್ಟು 10884 ರೈಲ್ವೇ ಕ್ಲರ್ಕ್, ಸ್ಟೇಷನ್ ಮಾಸ್ಟರ್ & ಇತರೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅ