ಕೇಂದ್ರೀಯ ವಿದ್ಯಾಲಯ ಚನ್ನಪಟ್ಟಣದಲ್ಲಿ ಖಾಲಿ ಇರುವ ಪ್ರಾಥಮಿಕ ಮತ್ತು ಪದವೀಧರ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: Kendriya Vidyalaya Channapatna Jobs 2024
ಪಿ ಎಂ ಶ್ರೀ ಕೇಂದ್ರೀಯ ವಿದ್ಯಾಲಯ, ಚನ್ನಪಟ್ಟಣ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಟಿಜಿಟಿ ಶಿಕ್ಷಕರು, ಪ್ರಾಥಮಿಕ ಶಿಕ್ಷಕರು & ಪೋಸ್ಟ್ ಗ್ರ್ಯಾಜುಯೇಟ್ ಟೀಚರ್ ಹುದ್ದೆಗಳನ್ನು 2024-25 ನೇ ಸಾಲಿಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟವಾಗಿದೆ. ಇಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ ಜೂನ್ 22, 2024 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕೇಂದ್ರೀಯ ವಿದ್ಯಾಲಯ, ಚನ್ನಪಟ್ಟಣದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ/ Post Details:
ಹುದ್ದೆಯ ಹೆಸರು | ವಿಷಯ |
ತರಬೇತಿ ಹೊಂದಿದ ಪದವೀಧರ ಶಿಕ್ಷಕರು (TGT) | ಇಂಗ್ಲೀಷ್ |
ಪ್ರಾಥಮಿಕ ಶಿಕ್ಷಕರು | ಎಲ್ಲ ವಿಷಯಗಳು |
ಇತರೆ | ಕ್ರೀಡಾ ತರಬೇತುದಾರ/ ವಿಶೇಷ ಶಿಕ್ಷಣ/ ಕೌನ್ಸಲರ್ ಗಳು |
ವೇತನ/ Salary
ಹುದ್ದೆಗಳು | ವೇತನ |
ಇಂಗ್ಲೀಷ್ | 44600-142400 |
ಎಲ್ಲ ವಿಷಯಗಳು | 35400-112400 |
ಕ್ರೀಡಾ ತರಬೇತುದಾರ/ ವಿಶೇಷ ಶಿಕ್ಷಣ/ ಕೌನ್ಸಲರ್ ಗಳು | 44600-142400 |
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಡಿಎಡ್, ಬಿಎಡ್ ವಿದ್ಯಾರ್ಹತೆಯನ್ನು ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಟ 45 ವಯೋಮಿತಿಯನ್ನು ಮೀರಬಾರದು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ ನಡೆಸಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟಾ, ಇತ್ತೀಚಿನ ಫೋಟೋ, ಮೂಲ ದಾಖಲೆಗಳು ಮತ್ತು ಜೆರಾಕ್ಸ್ ಪ್ರತಿಗಳೊಂದಿಗೆ ದಿನಾಂಕ 22-06-2024 ರಂದು ಮುಂಜಾನೆ 09:00 ಗಂಟೆಗೆ ಚನ್ನಪಟ್ಟಣದ ಪಿಎಂಶ್ರೀ ಕೇಂದ್ರೀಯ ವಿದ್ಯಾಲಯಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಕಛೇರಿಯಲ್ಲಿ ಖಾಲಿ ಇರುವ 30 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನ ನಡೆಯುವ ದಿನಾಂಕ: 22-06-2024
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಕೌಂಟೆಂಟ್ & ಸಾಕ್ಷರರು ಹುದ್ದೆಗಳ ಭರ್ತಿಗೆ ಅ
Pingback: ಕರ್ನಾಟಕ ವಸತಿ ಶಾಲೆಯಲ್ಲಿ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 35400/- Sainik School Kod
Pingback: ಕರ್ನಾಟಕದ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತ